ನವದೆಹಲಿ: ಭಾರತದಲ್ಲಿನ ಜರ್ಮನಿಯ ರಾಯಭಾರಿ ಫಿಲಿಪ್ ಆಕರ್ಮನ್ ಮತ್ತು ಆಸ್ಟ್ರೇಲಿಯಾದ ಹೈಕಮಿಷನರ್ ಬ್ಯಾರಿ ಒ'ಫಾರೆಲ್ ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಭಾರತದೊಂದಿಗೆ ಉಭಯ ದೇಶಗಳ ಸಂಬಂಧ ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು.

ಖರ್ಗೆ ಅವರು ತಮ್ಮ ರಾಜಾಜಿ ಮಾರ್ಗ್ ನಿವಾಸದಲ್ಲಿ ನಡೆದ ಸಭೆಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ .
'ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯೊಂದಿಗೆ ರಾಜತಾಂತ್ರಿಕ ಸಂಬಂಧ ಸ್ಥಾಪಿಸಿದ ದೇಶಗಳಲ್ಲಿ ಭಾರತವೂ ಒಂದಾಗಿದೆ. ದ್ವಿಪಕ್ಷೀಯವಾಗಿ ಮತ್ತು ಜಾಗತಿಕ ಸನ್ನಿವೇಶದಲ್ಲಿ ಇಂದು ಜರ್ಮಿನಿಯು ಭಾರತದ ಅತ್ಯಂತ ಮೌಲ್ಯಯುತ ಪಾಲುದಾರರಲ್ಲಿ ಒಂದಾಗಿದೆ' ಎಂದು ಅವರು ತಿಳಿಸಿದ್ದಾರೆ.