ಕಾಸರಗೋಡು: ಜಗತ್ತನ್ನು ಮುನ್ನಡೆಸುವ ಶಕ್ತಿಯನ್ನು ಯೋಗ ಹೊಂದಿದೆ ಎಂಬ ಅಂಶ ಇಂದು ಸಾಬೀತಾಗಿರುವುದಾಗಿ ಪದ್ಮಶ್ರೀ ಪುರಸ್ಕøತ ಹಾಗೂ ಭಾರತೀಯ ಆರ್ಥೋಪೆಡಿಕ್ ಅಸೋಸಿಯೇಶನ್ ಮಾಜಿ ಉಪಾಧ್ಯಕ್ಷ ಡಾ.ಜಾನ್ ಎಬಿನೇಜರ್ ತಿಳಿಸಿದ್ದಾರೆ.
ಅವರು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಮಾತನಾಡಿದರು. ಯೋಗವು ಐದು ಸಾವಿರ ವರ್ಷಗಳಿಗಿಂತಲೂ ಹಳೆಯದಾದ ವಿಜ್ಞಾನವಾಗಿದೆ. ಇದನ್ನು ಅಭ್ಯಾಸ ಮಾಡುವುದರಿಂದ ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ಒಟ್ಟಿಗೆ ಪಡೆಯಬಹುದಾಗಿದೆ. ಯೋಗವು ಅನೇಕ ರೋಗಗಳನ್ನು ತಡೆಗಟ್ಟುತ್ತದೆ. ಯೋಗವು ಜೀವನಶೈಲಿಯ ರೋಗಗಳ ವಿರುದ್ಧ ಹೋರಾಡುತ್ತದೆ ಮತ್ತು ಮನಸ್ಸನ್ನು ನಿಯಂತ್ರಿಸುತ್ತದೆ ಎಂದು ತಿಳಿಸಿದರು.
ಕುಲಪತಿ ಪೆÇ್ರ.ಎಚ್.ವೆಂಕಟೇಶ್ವರಲು ಯೋಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗಕ್ಕೆ ಸಂಬಂಧಿಸಿದ ಅಧ್ಯಯನ ಮತ್ತು ಸಂಶೋಧನಾ ಕ್ಷೇತ್ರಗಳು ಅಭಿವೃದ್ಧಿ ಹೊಂದುತ್ತಿವೆ. ಯೋಗ ವಿಶ್ವಕ್ಕೆ ಭಾರತ ನೀಡಿದ ಕೊಡುಗೆಯಾಗಿದೆ ಎಂದು ತಿಳಿಸಿದರು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಯೋಗ ತರಬೇತಿಯಲ್ಲಿ ಪಾಲ್ಗೊಂಡಿದ್ದರು.