ನವದೆಹಲಿ (PTI): ಯಾವುದೇ ಅರ್ಜಿ ಹಾಗೂ ಗುರುತಿನ ಚೀಟಿ ಇಲ್ಲದೆಯೇ ₹ 2 ಸಾವಿರ ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿ ಆರ್‌ಬಿಐ ತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ತುರ್ತು ವಿಚಾರಣೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿತು.

ಈ ವಿಚಾರವಾಗಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ಪಟ್ಟಿಗೆ ಸೇರಿಸುವುದಕ್ಕೆ ಸಂಬಂಧಿಸಿ ರಿಜಿಸ್ಟ್ರಿ ಸಲ್ಲಿಸಿದ್ದ ವರದಿಯನ್ನು ಪರಿಶೀಲಿಸಿದ ನಂತರ ಸುಪ್ರೀಂಕೋರ್ಟ್ ಈ ವಿಷಯ ಸ್ಪಷ್ಟಪಡಿಸಿತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ರಾಜೇಶ್ ಬಿಂದಲ್ ಅವರಿದ್ದ ರಜಾಕಾಲದ ನ್ಯಾಯಪೀಠ, ಬೇಸಿಗೆ ರಜೆ ಮುಗಿದ ನಂತರ, ಈ ವಿಷಯವನ್ನು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಲ್ಲಿ ಮಂಡಿಸುವಂತೆ ಸೂಚನೆ ನೀಡಿತು.
ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಅರ್ಜಿದಾರರೂ ಆದ ವಕೀಲ ಅಶ್ವಿನಿ ಉಪಾಧ್ಯಾಯ ಮನವಿ ಸಲ್ಲಿಸಿದ್ದರು.