ಇಂದೋರ್: ಮಧ್ಯಭಾರತದಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ತಜ್ಞ ಸದಸ್ಯರೊಬ್ಬರು ಶುಕ್ರವಾರ ಕಳವಳ ವ್ಯಕ್ತಪಡಿಸಿದ್ದಾರೆ.
ಇಂದೋರ್: ಮಧ್ಯಭಾರತದಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ತಜ್ಞ ಸದಸ್ಯರೊಬ್ಬರು ಶುಕ್ರವಾರ ಕಳವಳ ವ್ಯಕ್ತಪಡಿಸಿದ್ದಾರೆ.
ಇಂದೋರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎನ್‌ಜಿಟಿ ಸದಸ್ಯ ಅಫ್ರೋಜ್ ಅಹಮದ್ ಅವರು, 'ಮಧ್ಯಭಾರತದಲ್ಲಿರುವ ಅಂತರ್ಜಲ ಮಟ್ಟವು ಆ ಪ್ರದೇಶಕ್ಕೆ ಸೀಮಿತವಾಗಿದ್ದು, ಅದನ್ನು ಸಂರಕ್ಷಿಸುವ ಕಟ್ಟುನಿಟ್ಟಿನ ಕೆಲಸಗಳಾಗಬೇಕಿದೆ' ಎಂದರು.
ಪರಿಸರ ಸಂಬಂಧಿ ಯೋಜನೆಗಳು ಹಾಗೂ ಅದಕ್ಕೆ ಸಂಬಂಧಿಸಿದ ವಿಷಯಗಳ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದ ಅಹಮದ್ ಅವರು, 'ಕೈಗಾರಿಕಾ ತ್ಯಾಜ್ಯಗಳು ಅಂತರ್ಜಲವನ್ನು ಕಲುಷಿತಗೊಳಿಸದಂತೆ ನೋಡಿಕೊಳ್ಳಲು ಎಲ್ಲಾ ಸರ್ಕಾರಿ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಬೇಕು' ಎಂದೂ ಸಲಹೆ ನೀಡಿದ್ದಾರೆ.
'ದೇಶದಲ್ಲಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವ ಹೊಂದಿರುವ ಮೆಟ್ಟಿಲುಬಾವಿಗಳು ಪರಿಸರದ ಪ್ರಮುಖ ಭಾಗವಾಗಿದೆ. ಅವುಗಳನ್ನು ಸಂರಕ್ಷಿಸುವ ಅಗತ್ಯವಿದೆ' ಎಂದೂ ಅವರು ಒತ್ತಿ ಹೇಳಿದ್ದಾರೆ.