ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು ಎಂದು ನಾವೆಲ್ಲರೂ ಬಯಸುತ್ತೇವೆ.

ಬ್ರಿಜ್‌ಭೂಷಣ್ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಕಳೆದ ಒಂದೂ ತಿಂಗಳಿಗೂ ಹೆಚ್ಚು ಸಮಯದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ನಿಷ್ಪಕ್ಷಪಾತ ತನಿಖೆ ನಡೆಯಬೇಕು. ನ್ಯಾಯ ಸಿಗಬೇಕೆಂದು ನಮ್ಮೆಲ್ಲರ ಬಯಕೆಯಾಗಿದೆ. ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕವಷ್ಟೇ ಅದು ನಡೆಯಲಿದೆ ಎಂದು 'ಟೈಮ್ಸ್ ನೆಟ್‌ವರ್ಕ್' ಆಯೋಜಿಸಿದ ಇಂಡಿಯಾ ಎಕನಾಮಿಕ್ ಕಾನ್‌ಕ್ಲೇವ್‌ನಲ್ಲಿ ತಿಳಿಸಿದ್ದಾರೆ.
ದೆಹಲಿ ಪೊಲೀಸ್ ಪ್ರಕರಣದ ತನಿಖೆ ನಡೆಸುತ್ತಿದೆ. ಪಕ್ಷಪಾತದ ಪ್ರಶ್ನೆಯೇ ಇಲ್ಲ. ಬ್ರಿಜ್‌ಭೂಷಣ್ ಬಿಜೆಪಿ ಸಂಸದರಾಗಿದ್ದರಿಂದ ಕ್ರಮ ವಿಳಂಬವಾಗಿದೆ ಎನ್ನುವುದರಲ್ಲಿ ಸತ್ಯವಿಲ್ಲ ಎಂದು ಹೇಳಿದರು.
ದೆಹಲಿ ಪೊಲೀಸ್ ಶೀಘ್ರದಲ್ಲೇ ಚಾರ್ಜ್‌ಶೀಟ್ ಸಲ್ಲಿಸುವ ನಿರೀಕ್ಷೆಯಿದೆ. ತ್ವರಿತ ಗತಿಯಲ್ಲಿ ತನಿಖೆ ನಡೆಯಬೇಕು ಎಂದು ಬಯಸುತ್ತೇವೆ ಎಂದು ಹೇಳಿದರು.
ಕುಸ್ತಿಪಟುಗಳ ಪ್ರತಿಯೊಂದು ಬೇಡಿಕೆಯನ್ನು ಸರ್ಕಾರವು ಈಡೇರಿಸಿದೆ. ಬ್ರಿಜ್‌ಭೂಷಣ್ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿಯನ್ನು ರಚಿಸಲಾಯಿತು ಎಂದು ಅವರು ಉಲ್ಲೇಖ ಮಾಡಿದ್ದಾರೆ.