ಅಹಮದಾಬಾದ್: ಆಟವಾಡುತ್ತಿದ್ದ ವೇಳೆ ಎರಡು ವರ್ಷದ ಬಾಲಕಿ ಒಬ್ಬಳು ಕಾಲು ಜಾರಿ 200 ಅಡಿ ಬೋರ್ವೆಲ್ ಒಳಗೆ ಬಿದ್ದಿರುವ ಘಟನೆ ಗುಜರಾತಿನ ಜಾಮ್ನಗರ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯೂ ಜಾಮ್ನಗರದ ತಮಚನ್ ಎಂಬ ಗ್ರಾಮದಲ್ಲಿ ನಡೆದಿದ್ದು ರಕ್ಷಣಾ ಕಾರ್ಯಾಚರಣೇ ಭರದಿಂದ ಸಾಗಿದೆ ಎಂದು ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಭರದಿಂದ ಸಾಗಿದ ಕಾರ್ಯಾಚರಣೆ
ಈ ಕುರಿತು ಪ್ರತಿಕ್ರಿಯಿಸಿರುವ ತಾಲೂಕು ಅಭಿವೃದ್ದಿ ಅಧಿಕಾರಿ ಎನ್.ಎ.ಸರ್ವಯ್ಯ ಜಾಮ್ನಗರದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ತಮಚನ್ ಗ್ರಾಮದಲ್ಲಿ ಘಟನೆ ನಡೆದಿದ್ದು ಬುಡಕಟ್ಟು ಸಮುದಾಯಕ್ಕೆ ಸೇರಿದ ಬಾಲಕಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಬೋರ್ವೆಲ್ ಒಳಗೆ ಬಿದ್ದಿದ್ದಾಳೆ.
ಘಟನೆ ಬೆಳಗ್ಗೆ 9 ಘಂಟೆ ಸುಮಾರಿಗೆ ನಡೆದಿದ್ದು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಸುಮಾರು 20 ಅಡಿ ಆಳದಲ್ಲಿ ಬಾಲಕಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ತಾಲೂಕು ಅಭಿವೃದ್ಧಿ ಅಧಿಕಾರಿ ಎನ್.ಎ.ಸರ್ವಯ್ಯ ತಿಳಿಸಿದ್ದಾರೆ.