ನವದೆಹಲಿ: ಬಿಪೊರ್‌ಜಾಯ್ ಚಂಡಮಾರುತ ಬಾಧಿತ ಪ್ರದೇಶಗಳ ಪರಿಸ್ಥಿತಿ ಪರಿಶೀಲನೆಗಾಗಿ ಗುಜರಾತ್‌ನ ಕಛ್ ಹಾಗೂ ಜಖೌ ಬಂದರಿಗೆ ಗೃಹ ಸಚಿವ ಅಮಿತ್ ಶಾ ಅವರು ಇಂದು (ಶನಿವಾರ) ಭೇಟಿ ನೀಡಲಿದ್ದಾರೆ.
ನವದೆಹಲಿ: ಬಿಪೊರ್‌ಜಾಯ್ ಚಂಡಮಾರುತ ಬಾಧಿತ ಪ್ರದೇಶಗಳ ಪರಿಸ್ಥಿತಿ ಪರಿಶೀಲನೆಗಾಗಿ ಗುಜರಾತ್‌ನ ಕಛ್ ಹಾಗೂ ಜಖೌ ಬಂದರಿಗೆ ಗೃಹ ಸಚಿವ ಅಮಿತ್ ಶಾ ಅವರು ಇಂದು (ಶನಿವಾರ) ಭೇಟಿ ನೀಡಲಿದ್ದಾರೆ.
ಈ ಬಗ್ಗೆ ಗೃಹ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಶಾ ಸಭೆ ನಡೆಸಲಿದ್ದಾರೆ.
ಚಂಡಮಾರುತ ಬಾಧಿತ ಪ್ರದೇಶಗಳ ವೈಮಾನಿಕ ವೀಕ್ಷಣೆ ಮಾಡಲಿರುವ ಶಾ, ಬಳಿಕ ಕಛ್‌ನಲ್ಲಿರುವ ಜಖೌ ಬಂದರು ಮತ್ತು ಮಾಂದ್ವಿಗೆ ತೆರಳಲಿದ್ದಾರೆ. ಆಶ್ರಯ ಶಿಬಿರಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಭುಜ್‌ನಲ್ಲಿರುವ ಸ್ವಾಮಿ ನಾರಾಯಣ್ ದೇವಾಲಯಕ್ಕೂ ತೆರಳಲಿರುವ ಗೃಹ ಸಚಿವರು, ಅಲ್ಲಿ ಸಂತ್ರಸ್ತರಿಗೆ ನೀಡಲಾಗುತ್ತಿರುವ ಆಹಾರ ಮತ್ತು ಇತರ ಸೌಕರ್ಯಗಳ ಪರಿಶೀಲನೆ ಮಾಡಲಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.