ಮಂಜೇಶ್ವರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮೀಯಪದವು ವಿದ್ಯಾವರ್ಧಕ ಎ.ಯು.ಪಿ ಶಾಲೆಯಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ಎಂ.ರಾಮಕೃಷ್ಣರಾವ್ ಸಭಾಂಗಣದಲ್ಲಿ ಜರಗಿತು. ಶಾಲಾ ಅಧ್ಯಾಪಕ ವಿನಯಕೃಷ್ಣ.ಎಸ್ ಇವರು ವಿದ್ಯಾರ್ಥಿಗಳಿಗೆ ಯೋಗದ ಆಸನಗಳನ್ನು ಹೇಳಿಕೊಟ್ಟು ಯೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿಯನ್ನು ಮೂಡಿಸಿದರು. ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ, ಶಾಲಾ ದೈಹಿಕ ಶಿಕ್ಷಕ ಎಸ್.ಎಸ್.ಪ್ರಸಾದ್ ಹಾಗೂ ಶಾಲಾ ಅಧ್ಯಾಪಕ,ಅಧ್ಯಾಪಿಕೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.