ಕೋಲ್ಕತಾ: ಪ್ರತಿಕೂಲ ಹವಾಮಾನ ವೈಪರಿತ್ಯದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಪರಿಣಾಮ ಅದರಲ್ಲಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಮಧ್ಯಾಹ್ನ ಕೆಟ್ಟ ಹವಾಮಾನದಿಂದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ರಾಜ್ಯದ ಉತ್ತರ ಭಾಗದ ಸಿಲಿಗುರಿ ಬಳಿಯ ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದಾಗ ಅವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Mamata Banerjee in #SSKm hospital . She did not take wheel chair ,but she was having problem in walking . She got hurt in her legs while her plane did emergency landing in Sevoke today @CNNnews18 @MamataOfficial pic.twitter.com/QNXU1EmvdX
— Kamalika Sengupta (@KamalikaSengupt) June 27, 2023
ಬೈಕುಂತಪುರ ಅರಣ್ಯದ ಮೇಲೆ ಕಾಪ್ಟರ್ ಹಾರುತ್ತಿದ್ದಾಗ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ತೀವ್ರವಾಗಿ ಅಲುಗಾಡಿದಾಗ ಬ್ಯಾನರ್ಜಿ ಅವರ ಸೊಂಟ ಮತ್ತು ಕಾಲುಗಳಿಗೆ ಗಾಯವಾಗಿದೆ ಎಂದು ವರದಿಯಾಗಿದೆ. "ಭಾರೀ ಮಳೆ ಮತ್ತು ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಕೆಟ್ಟ ಹವಾಮಾನದಿಂದ ಹೆಲಿಕಾಪ್ಟರ್ ತೀವ್ರವಾಗಿ ಅಲುಗಾಡಲು ಪ್ರಾರಂಭಿಸಿದ ನಂತರ ಪೈಲಟ್ ತುರ್ತು ಭೂಸ್ಪರ್ಶ ಮಾಡಲು ನಿರ್ಧರಿಸಿದರು" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತಾಗೆ ವಿಮಾನದಲ್ಲಿ ಜಲ್ಪೈಗುರಿಯಿಂದ ಬಾಗ್ದೋಗ್ರಾ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದರು. ಅವರು ಕೋಲ್ಕತಾಗೆ ಹಿಂದಿರುಗಿದ ನಂತರ, ಸರ್ಕಾರಿ ಸ್ವಾಮ್ಯದ ಎಸ್‌ಎಸ್‌ಕೆಎಂ ಆಸ್ಪತ್ರೆಯ ವೈದ್ಯರು ಅವರಿಗೆ ಚಿಕಿತ್ಸೆ ನೀಡಿದರು.