ಪೆರ್ಲ :ಮಕ್ಕಳ ಕನಸನ್ನು ನನಸಾಗಿಸುವ ಜವಾಬ್ದಾರಿ ಶಿಕ್ಷಕ ಮತ್ತು ಹೆತ್ತವರಿಗೆ ಸಮಾನವಾಗಿ ಇರುವುದಾಗಿ ಎಣ್ಮಕಜೆ ಗ್ರಾಮ ಪಂಚಾಯಿತಿ ಸದಸ್ಯೆ ರಮ್ಲಾ ತಿಳಿಸಿದ್ದಾರೆ. ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯ ಗ್ರಂಥಾಲಯ ಸಭಾಂಗಣದಲ್ಲಿ ಗುರುವಾರ ನಡೆದ ಪ್ರವೇಶೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಶಾಲಾ ಪ್ರಬಂಧಕ ಪಿ. ಎಸ್ ಶ್ರೀಕೃಷ್ಣ ವಿಶ್ವಾಮಿತ್ರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಬಿ.ರಾಜೇಂದ್ರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀ ಸತ್ಯನಾರಾಯಣ ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಸದಾಶಿವ ಭಟ್ ಹರಿನಿಲಯ, ಶ್ರೀ ಸತ್ಯನಾರಾಯಣ ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಬಿ.ಎಂ, ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಜ್ಯೋತಿಲಕ್ಷ್ಮೀ, ಎಲ್‍ಪಿ ಶಾಲಾ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಭಟ್ ಕೋಟೆ ಉಪಸ್ಥಿತರಿದ್ದರು. ಈ ಸಂದರ್ಭ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲಿ ಎ ಪ್ಲಸ್ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶಿಕ್ಷಕರಾದ ಉದಯ ಸಾರಂಗ್, ಉಮೇಶ್ ಕೆ. ಪೆರ್ಲ, ಕೃಷ್ಣಪ್ರಸಾದ್ ಕೋಳಾರಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಶಿಕ್ಷಕ ಕೇಶವಪ್ರಕಾಶ್ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ನವಾಗತರನ್ನೊಳಗೊಂಡ ವಿದ್ಯಾರ್ಥಿಗಳ ಮೆರವಣಿಗೆ ಪೇಟೆಯಲ್ಲಿ ನಡೆಯಿತು. ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯ ಬಟ್ಟು ಶೆಟ್ಟಿ ಕಾಟುಕುಕ್ಕೆ, ಶಾಲಾ ಆಡಳಿತ ಮಂಡಳಿಯ ವೆಂಕಟ್ರಾಜ ಮಿತ್ರ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಪಾಲ್ಗೊ0ಡಿದ್ದರು.