ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ತಮ್ಮ ಸರ್ಕಾರವು ದೇಶದಲ್ಲಿ ಅಭಿವೃದ್ಧಿ ಮತ್ತು ಬೆಳವಣಿಗೆಯ ಬೇರುಗಳನ್ನು ಪೋಷಿಸಿದ್ದು, ಮೂಲಸೌಕರ್ಯ ಕ್ಷೇತ್ರಕ್ಕೆ ಅಸಾಧಾರಣ ಸ್ವರೂಪವನ್ನು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದರು.
ಪ್ರತಿ ವಲಯವೂ ತ್ವರಿತ ಪ್ರಗತಿಯನ್ನು ಸಾಧಿಸಿದೆ. ಅಭಿವೃದ್ಧಿ ಹೊಂದಿದ ಭಾರತಕ್ಕೆ ಇದು ವೇದಿಕೆಯನ್ನು ಕಲ್ಪಿಸಿದೆ ಎಂದೂ ಅವರು ಹೇಳಿದ್ದಾರೆ.
ಮೋದಿ ನೇತೃತ್ವದ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಅಂಗವಾಗಿ ಬಿಜೆಪಿಯು ದೇಶದಾದ್ಯಂತ ಬೃಹತ್ ಜನಸಂಪರ್ಕ ಕಾರ್ಯಕ್ರಮ ಹಮ್ಮಿಕೊಂಡಿರುವಾಗಲೇ ಟ್ವಿಟರ್‌ನಲ್ಲಿ '9 ವರ್ಷಗಳ ಗತಿ ಮತ್ತು ಪ್ರಗತಿ' ಹ್ಯಾಷ್‌ಟ್ಯಾಗ್‌ನೊಂದಿಗೆ ಪ್ರಧಾನಿಯವರು ಈ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಮೂಲಸೌಕರ್ಯ ಕ್ಷೇತ್ರದಲ್ಲಿ ತಮ್ಮ ಸರ್ಕಾರ ಮಾಡಿರುವ ಸಾಧನೆಗಳ ಬಗ್ಗೆ ಪ್ರಧಾನಿಯವರು ತಮ್ಮ ಲೇಖನಗಳನ್ನೂ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.