ತಿರುವನಂತಪುರ: ಬೀದಿ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಬೀದಿ ನಾಯಿಗಳ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ತರುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಕೇರಳ ಸರ್ಕಾರ ಬುಧವಾರ ತಿಳಿಸಿದೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಬಡತನ ನಿರ್ಮೂಲನೆ ಮತ್ತು ಮಹಿಳಾ ಸಬಲೀಕರಣ ಉದ್ದೇಶದ ಕುಟುಂಬಶ್ರೀ ಯೋಜನೆಯ ಮೇಲಿನ ನಿರ್ಬಂಧಗಳನ್ನು ತೆರವು ಮಾಡುವಂತೆಯೂ ನ್ಯಾಯಾಲಯದ ಎದುರು ಮನವಿ ಮಾಡಲಾಗುತ್ತದೆ ಎಂದು ಸಚಿವ ಎಂ.ಬಿ.ರಾಜೇಶ್ ತಿಳಿಸಿದರು.
ತಕ್ಷಣದಿಂದಲೇ ಕುಟುಂಬಶ್ರೀ ಯೋಜನೆ ವ್ಯಾಪ್ತಿಯಿಂದ ಪ್ರಾಣಿಗಳ ಸಂತಾನ ಶಕ್ತಿ ಹರಣ(ಎಬಿಸಿ) ಪ್ರಕ್ರಿಯೆಯನ್ನು ಹೊರಗಿಡಿ ಎಂದು 2021ರ ಡಿಸೆಂಬರ್‌ಬಲ್ಲಿ ಹೈಕೋರ್ಟ್ ಸೂಚಿಸಿತ್ತು.
ಜನರು ನಾಯಿಯೊಂದನ್ನು ಕಟ್ಟಿಹಾಕಿ ಥಳಿಸಿ ಕೊಂದ ಘಟನೆ ಬಳಿಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ನಿರ್ದೇಶನ ನೀಡಿತ್ತು.
ಬೀದಿ ನಾಯಿ ದಾಳಿ ಪ್ರಕರಣಗಳು ಕಡಿಮೆಯಾಗಬೇಕೆಂದರೆ ಪ್ರಾಣಿಗಳ ಹಿಂಸೆ ತಡೆ ಕಾಯ್ದೆ ಮತ್ತು ಪ್ರಾಣಿಗಳ ಜನನ ನಿಯಂತ್ರಣ ಕಾನೂನುಗಳಲ್ಲಿನ ಕೆಲವು ನಿಯಮಗಳು ಬದಲಾವಣೆಯಾಗಬೇಕಿದೆ ಎಂದು ಸರ್ಕಾರ ಹೇಳಿದೆ.