ನವದೆಹಲಿ: ಹಿರಿಯ ವಕೀಲ ತುಷಾರ್ ಮೆಹ್ತಾ ಅವರನ್ನು ಶುಕ್ರವಾರ ಮೂರು ವರ್ಷಗಳ ಅವಧಿಗೆ ಭಾರತದ ಸಾಲಿಸಿಟರ್ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ.
ಮೆಹ್ತಾ ಅವರನ್ನು ಅಕ್ಟೋಬರ್ 10, 2018 ರಂದು ಸಾಲಿಸಿಟರ್ ಜನರಲ್ ಆಗಿ ನೇಮಿಸಲಾಯಿತು ಮತ್ತು ಅಂದಿನಿಂದ ಅವರ ಅವಧಿಯನ್ನು ಎರಡು ಬಾರಿ ವಿಸ್ತರಣೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ, ಮೆಹ್ತಾ ಅಲ್ಲದೆ, ಸುಪ್ರೀಂ ಕೋರ್ಟ್‌ಗೆ ಆರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳನ್ನು ಮೂರು ವರ್ಷಗಳ ಅವಧಿಗೆ ಮರುನೇಮಕ ಮಾಡಲಾಗಿದೆ.
ವಿಕ್ರಮಜಿತ್ ಬ್ಯಾನರ್ಜಿ, ಕೆ ಎಂ ನಟರಾಜ್, ಬಲ್ಬೀರ್ ಸಿಂಗ್, ಎಸ್ ವಿ ರಾಜು, ಎನ್ ವೆಂಕಟರಾಮನ್ ಮತ್ತು ಐಶ್ವರ್ಯ ಭಾಟಿ ಅವರು ಸುಪ್ರೀಂ ಕೋರ್ಟ್‌ಗೆ ಮರು ನೇಮಕಗೊಂಡ ಆರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳಾಗಿದ್ದಾರೆ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ಗೊರಾಡಿಯಾ ದಿವಾನ್ ಮತ್ತು ಸಂಜಯ್ ಜೈನ್ ಅವರ ಅಧಿಕಾರಾವಧಿ ಶುಕ್ರವಾರ ಕೊನೆಗೊಂಡಿದ್ದು, ಈ ಇಬ್ಬರು ಮರು ನೇಮಕಗೊಂಡ ಕಾನೂನು ಅಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಜಯಂತ್ ಕೆ ಸುದ್ ಅವರ ಅಧಿಕಾರಾವಧಿ ಗುರುವಾರ ಕೊನೆಗೊಂಡಿದ್ದು, ಅವರೂ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.