HEALTH TIPS

ರಾಜಕೀಯ ವಿರೋಧಿಗಳಿಗೆ ಕೇಂದ್ರ ಸರ್ಕಾರದಿಂದ ಕಿರುಕುಳ: ಮಲ್ಲಿಕಾರ್ಜುನ ಖರ್ಗೆ

               ವದೆಹಲಿ: ತಮಿಳುನಾಡು ಇಂಧನ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಕಾಂಗ್ರೆಸ್ ಬುಧವಾರ ಖಂಡಿಸಿದೆ.

                    ರಾಜಕೀಯ ವಿರೋಧಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

             ಈ ಕುರಿತು ಬುಧವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದು ಮೋದಿ ಸರ್ಕಾರದ ಕಿರುಕುಳ ಮತ್ತು ಸೇಡಿನ ರಾಜಕೀಯ ಹೊರತು ಬೇರೇನೂ ಅಲ್ಲ ಎಂದು ಆರೋಪಿಸಿದ್ದಾರೆ.


                    ಮೋದಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದವರನ್ನು ದಮನಿಸಲಾಗುತ್ತದೆ. ಆದರೆ ಈ ಬೆದರಿಕೆಗಳಿಗೆಲ್ಲ ವಿರೋಧ ಪಕ್ಷಗಳು ಬಗ್ಗುವುದಿಲ್ಲ ಎಂದು ಅವರು ಹೇಳಿದ್ದಾರೆ.

                   ಹಣ ಅಕ್ರಮ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಥಿಲ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಬಳಿಕ ಇ.ಡಿ ಬಂಧಿಸಿದೆ. ತೀವ್ರ ಅಸ್ವಸ್ಥಗೊಂಡ ಸೆಂಥಿಲ್ ಅವರನ್ನು ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries