ಲಖನೌ: ಹಿಂದಿನ ಯುಪಿಎ ಸರ್ಕಾರಕ್ಕೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶೇಕಡ 58ರಷ್ಟು ಹೆಚ್ಚು ಉದ್ಯೋಗ ನೀಡಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಲಖನೌ: ಹಿಂದಿನ ಯುಪಿಎ ಸರ್ಕಾರಕ್ಕೆ ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶೇಕಡ 58ರಷ್ಟು ಹೆಚ್ಚು ಉದ್ಯೋಗ ನೀಡಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಲಖನೌದಲ್ಲಿ ಆಯೋಜಿಸಲಾದ ರೋಜ್‌ಗಾರ್ ಮೇಳ (ಉದ್ಯೋಗ ಮೇಳ) ಉದ್ದೇಶಿಸಿ ಮಾತನಾಡಿದ ಅವರು, ಇದುವರೆಗೆ 8.8 ಲಕ್ಷ ಉದ್ಯೋಗ ನೀಡಲಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ರೋಜ್‌ಗಾರ್ ಮೇಳದ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದ 70 ಸಾವಿರ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ನೇಮಕಾತಿ ಪತ್ರ ವಿತರಿಸಿದ್ದಾರೆ.
ದೇಶದ 43 ಕಡೆಗಳಲ್ಲಿ ರೋಜ್‌ಗಾರ್ ಮೇಳ ಆಯೋಜಿಸಲಾಗಿತ್ತು.
ಮುದ್ರಾ ಯೋಜನೆಯಡಿ ಸರ್ಕಾರ ಈಗಾಗಲೇ ₹40 ಕೋಟಿ ಸಾಲ ಒದಗಿಸಿದೆ. ಈ ಪೈಕಿ ಮಹಿಳೆಯರಿಗೆ ₹27 ಕೋಟಿ ಸಾಲ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.