ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.
'ಭಾರತ ಆರ್ಥಿಕತೆಗೆ ಪ್ರತಿವರ್ಷ ಜಿಡಿಪಿಯ ಶೇ 10ರಷ್ಟು ಪ್ರಗತಿ ಸಾಧಿಸುವ ಸಾಮರ್ಥ್ಯವಿದೆ. ಇದರ ಮೂಲಕ 10 ವರ್ಷಗಳಲ್ಲಿ ನಿರುದ್ಯೋಗವನ್ನು ಕೊನೆಗೊಳಿಸುವ ಶಕ್ತಿ ಹೊಂದಿದೆ. ಈ ಮೂಲಕ ಬಡತನವನ್ನು ತೊಡೆದುಹಾಕಲು ಶಕ್ತವಾಗಿದೆ. ಆದರೆ ಹಣಕಾಸು ಇಲಾಖೆಗೆ ಇದರ ಸುಳಿವೇ ಇಲ್ಲ. ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು...' ಎಂದು ಗೇಲಿ ಮಾಡಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅರ್ಥಿಕ, ವಿದೇಶಾಂಗ ನೀತಿಗಳು, ಹಣಕಾಸು ಮಂತ್ರಿಯಾಗಿ ನಿರ್ಮಲಾ ಸೀತಾರಾಮನ್ ಅವರ ವೈಫಲ್ಯಗಳು, ಪೆಟ್ರೋಲ್ ಬೆಲೆ ಏರಿಕೆ, ರಾಮಸೇತು, ಪ್ರಧಾನಿ ಮೋದಿ ವಿದ್ಯಾರ್ಹತೆ ಹೀಗೆ ಹಲವು ವಿಷಯಗಳಲ್ಲಿ ಸುಬ್ರಮಣಿಯನ್ ಸ್ವಾಮಿ ನಿರಂತರವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತಾರೆ.
ಕೇಂದ್ರ ಸರ್ಕಾರದ್ದು ಹಿಜಾಡಾ ವಿದೇಶಾಂಗ ನೀತಿ ಎನ್ನುವ ಮೂಲಕ ಸುಬ್ರಮಣಿಯನ್ ಸ್ವಾಮಿ ಅವರು ಹಿಂದೊಮ್ಮೆ ವಿವಾದ ಸೃಷ್ಟಿ ಮಾಡಿದ್ದರು.