ಕಾಸರಗೋಡು : ಚೆರ್ಕಳದ ಹೊಸ ಬಸ್ ನಿಲ್ದಾಣದೊಳಗೆ ಪ್ರವೇಶಸದಿರುವ ಬಸ್‍ಗಳ ವಿರುದ್ಧ ಆರ್‍ಟಿಒ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಸರಗೋಡು ತಾಲೂಕು ಅಭಿವೃದ್ಧಿ ಸಮಿತಿ ಸಭೆ ಆಗ್ರಹಿಸಿದೆ. ತಾಲೂಕು ಅಭಿವೃದ್ಧಿ ಸಮಿತಿ ಸಭೆಗಳಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗೆ ಹಾಜರಾಗದಿರುವ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕಾಸರಗೋಡು ತಾಲೂಕು ಕಚೇರಿಯಲ್ಲಿ ನಡೆದ ತಾಲೂಕು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಶಾಸಕ ಎನ್.ಎ.ನೆಲ್ಲಿಕುನ್ನು ವಹಿಸಿದ್ದರು. ಸಭೆಯಲ್ಲಿ ವಿವಿಧ ರಾಜಕಾರಣಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ತಹಸೀಲ್ದಾರ್ ಸಾದಿಕ್ ಬಾಷಾ ಸ್ವಾಗತಿಸಿದರು. ಉಪ ತಹಸೀಲ್ದಾರ್ ನಾರಾಯಣ ವಂದಿಸಿದರು.