ಸಮರಸ ಚಿತ್ರಸುದ್ದಿ: ಬೆಂಗಳೂರು: ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಐಎಫ್ ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೇರಳ ರಾಜ್ಯ ಕಾಸರಗೋಡು ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಸುಬ್ಬಯ್ಯಕಟ್ಟಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಹೊರನಾಡಿನ ಕನ್ನಡ ಪತ್ರಕರ್ತರ ಸಮಸ್ಯೆ ಬಗ್ಗೆ ಗಮನಸೆಳೆಯಿತು. ಮಾಧ್ಯಮ ಅಕಾಡೆಮಿ ಸೇರಿದಂತೆ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳಲ್ಲಿ ಗಡಿನಾಡಿನ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಲಾಯಿತು. ಕೆಯುಡಬ್ಲ್ಯೂಜೆ ಕೇರಳ ಘಟಕದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪುಸ್ತಕ ನೀಡಿ ಅಭಿನಂದಿಸಲಾಯಿತು.
ಹೊರನಾಡಿನ ಕನ್ನಡಿಗರ ಬೇಡಿಕೆಗಳ ಬಗ್ಗೆ ಗಮನಹರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.