ಮಂಜೇಶ್ವರ : ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇರಳದ ಗ್ರಂಥಾಲಯ ಪಿತಾಮಹ ಪಿ. ಎನ್. ಪಣಿಕ್ಕರ್ ರವರ ಚರಮ ದಿನವನ್ನು ವಾಚನ ದಿನಾಚರಣೆಯಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಬರಹಗಾರ, ಮೀಯಪದವು ಉನ್ನತ ಪ್ರೌಢ ಶಾಲೆಯ ಪ್ರಾಧ್ಯಾಪಕ ಹರೀಶ್ ಜಿ ನಾಯಕ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು, ನಿವೃತ್ತ ಶಾಲಾ ಮುಖ್ಯ ಶಿಕ್ಷಕ ಸತ್ಯನಾರಾಯಣ ಶರ್ಮ ಪಿ ಆಗಮಿಸಿದ್ದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಪೊಯ್ಯೇಲ್, ಶತಮಾನೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಲಾ ಗ್ರಂಥಾಲಯ ಪುಸ್ತಕಗಳ ಪ್ರದರ್ಶನ ನಡೆಯಿತು. ವಾಚನ ದಿನಾಚರಣೆಯಂಗವಾಗಿ ಪ್ರತಿಜ್ಞೆಯನ್ನು ಶಿಕ್ಷಕಿ ಅಶ್ವಿನಿ ಎಂ ವಾಚಿಸಿದರು.