ಕಾಸರಗೋಡು: ನರೇಂದ್ರ ಮೋದಿ ನೇತೃತ್ವದ ಸರ್ಕಾರ ವ್ಯಾಪಾರಿ ವಲಯದ ಉತ್ತೇಜನಕ್ಕೆ ಹೆಚ್ಚಿನ ಆದ್ಯತೆ ಕಲ್ಪಿಸುತ್ತಿದ್ದು, ವಇವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿರುವುದಾಗಿ ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಮುಕ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ.
ಅವರು ಬಿಜೆಪಿ ಜಿಲ್ಲಾ ಸಮಿತಿ ಕಾಸರಗೋಡು ಸಿಟಿ ಟವರ್ ಸಭಾಂಗಣದಲ್ಲಿ ಆಯೋಜಿಸಿದ್ದ ವ್ಯಾಪಾರಿ ಸಂಗಮದಲ್ಲಿ ಭಾಗವಹಿಸಿ ಮಾತನಾಡಿದರು. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ಒಳಪಡಿಸಬೇಕಾದರೆ ಫೆಡರಲ್ ವ್ಯವಸ್ಥೆಯಡಿ ರಾಜ್ಯ ಸರ್ಕಾರಗಳ ಸಮ್ಮತಿಯೊಂದಿಗೆ ಕೆಲವೊಂದು ಬದಲಾವಣೆ ತರುವುದು ಅನಿವಾರ್ಯವಾಗಿದೆ. ಇದರಿಂದ ಅಂತಿಮ ತೀರ್ಮಾನ ಇನ್ನೂ ಸಾಧ್ಯವಾಗಿಲ್ಲ ಎಂದು ತಿಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ರಂಜಿತ್, ವಕೀಲ ಕೆ.ಪಿ ಪ್ರಕಾಶ್‍ಬಾಬು, ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಶ್ರೀಕಾಂತ್, ಉತ್ತರ ವಲಯ ಕಾರ್ಯದರ್ಶಿ ಪಿ.ಸುರೆಸ್‍ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಎ. ವೇಲಾಯುಧನ್ ಸ್ವಾಗತಿಸಿದರು. ವಿಜಯಕುಮಾರ್ ರೈ ವಂದಿಸಿದರು. ವಿವಿಧ ವಲಯದ ಉದ್ಯಮಿಗಳು, ವಯಾಪಾರಿಗಳು ಪಾಲ್ಗೊಂಡಿದ್ದರು.