ಉಪ್ಪಳ : 2023- 24 ಶೈಕ್ಷಣಿಕ ವರ್ಷದ ಮಂಗಲ್ಪಾಡಿ ಗ್ರಾಮ ಪಂಚಾಯತಿ ಮಟ್ಟದ ಶಾಲಾ ಪ್ರವೇಶೋತ್ಸವ ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಜರಗಿತು. ಮಂಗಲ್ಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರುಬಿನಾ ನೌಫಲ್ ಉದ್ಘಾಟಿಸಿದರು. ಗ್ರಾಮ ಪಂಚಾಯತಿ ಸದಸ್ಯ ಅಬ್ದುಲ್ ರೆಹಮಾನ್ ಟಿ.ಎಂ.ಅಧ್ಯಕ್ಷತೆ ವಹಿಸಿದ್ದರು. ಈ.ಪಂ. ಪಂಚಾಯತಿ ಸದಸ್ಯ ಗೋಲ್ಡನ್ ಅಬ್ದುಲ್ ರಹಿಮಾನ್ ಮಾತನಾಡಿ ಹೊಸ ಪುಟಾಣಿ ಮಕ್ಕಳಿಗೆ ಬ್ಯಾಗ್ ವಿತರಿಸಿದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಪುಟಾಣಿಗಳಿಗೆ ಕಿಟ್ ವಿತರಿಸಿದರು. ಗ್ರಾಮ ಪಂಚಾಯತಿ ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನ ಇಕ್ಬಾಲ್ ಅಕಾಡೆಮಿಕ್ ಮಾಸ್ಟರ್ ಪ್ಲಾನ್ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯತಿ ಸ್ಥಾಯೀ ಸಮಿತಿ ಅಧ್ಯಕ್ಷ ಮೊಹಮ್ಮದ್ ಹುಸೇನ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಹನೀಫ್, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಇಸ್ಮಾಯಿಲ್, ಶಾಲಾಭಿವೃದ್ದಿ ಸಮಿತಿ ಸದಸ್ಯ ಬಿ.ಎಂ. ಮುಸ್ತಫ, ಪಂಚಾಯತಿ ವಿದ್ಯಾಭ್ಯಾಸ ಸಂಯೋಜಕ ತಿಲಕ, ಆಶಾ ಕಾರ್ಯಕರ್ತೆ ಅನಿತಾ, ಹಿರಿಯ ಶಿಕ್ಷಕಿ ಅಪ್ಸ.ಯಸ್. ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯನಿ ಚಿತ್ರಾವತಿ ರಾವ್ ಚಿಗುರುಪಾದೆ ಸ್ವಾಗತಿಸಿ, ಬ್ರಿಜೇಶ್ ವಂದಿಸಿದರು. ಶಿಕ್ಷಕ ರಿಯಾಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ಪುಟಾಣಿ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿತು. ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು.