ಕಾಸರಗೋಡು: ಕೇಂದ್ರಾವಿಷ್ಕ್ರತ ಯೋಜನೆಗಳ ಜಿಲ್ಲಾಮಟ್ಟದ ಏಕೋಪನಾ ಮತ್ತು ಮೇಲ್ವಿಚಾರಣಾ ಸಮಿತಿಯು ತನ್ನ ಮೊದಲ ತ್ರೈಮಾಸಿಕ ಸಭೆಯನ್ನು ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಸಿತು.
ಜಿಲ್ಲಾ ಮಟ್ಟದ ಸಮನ್ವಯ ಮತ್ತು ಕೇಂದ್ರೀಯ ಯೋಜನೆಗಳ ಮೌಲ್ಯಮಾಪನಕ್ಕೆ ಅನುಕೂಲವಾಗುವಂತೆ ನಡೆಸಲಾದ ಸಭೆಯಲ್ಲಿ ಸಂಸದ ರಾಜಮೋಹನ್ ಉಣ್ಣಿತ್ತಾನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಸಭೆಯ ಅವಲೋಕನ ನಡೆಸಿದರು. ಅಮೃತ ಸರೋವರ ಯೋಜನೆಯಲ್ಲಿ ಪ್ರಸಕ್ತ 51 ಕೆರೆಗಳನ್ನು ಗುರುತಿಸಲಾಗಿದೆ. ಒಟ್ಟು 75 ಕೆರೆಗಳನ್ನು ಹೊಸದಾಗಿ ಅಳವಡಿಸಲು ತಿರ್ಮಾನಿಸಲಾಯಿತು. ಆರು ಬ್ಲಾಕ್‍ಗಳಲ್ಲಿ ಕನಿಷ್ಠ ಐದು ಕೆರೆಗಳನ್ನು ಪತ್ತೆ ಮಾಡಿ ವರದಿ ಸಲ್ಲಿಸುವಂತೆ ಬ್ಲಾಕ್ ಪಂಚಾಯಿತಿ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಯಿತು. ಸಾರ್ವಜನಿಕ ಅಥವಾ ಖಾಸಗಿ ಸಂಸ್ಥೆಗಳು ಯಾ ವ್ಯಕ್ತಿಗಳು ಉಚಿತವಾಗಿ ಒದಗಿಸಿದ ಕೆರೆಗಳನ್ನೂ ಪರಿಗಣಿಸುವಂತೆ ಸೂಚಿಸಲಯಿತು. ಕನಿಷ್ಠ 10 ಸೆಂಟ್ಸ್ ವಿಸ್ತೀರ್ಣದೊಂದಿಗೆಅಮೃತ್ ಸರೋವರ ಯೋಜನೆಯಡಿ ಕೆರೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಗ್ರಾಮೀಣ ಆವಸ್ ಯೋಜನೆ, ಸ್ವಚ್ಛ ಭಾರತ್ ಮಿಷನ್, ಜಲ ಜೀವನ್ ಮಿಷನ್, ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆ, ಮಧ್ಯಾಹ್ನದ ಊಟ ಯೋಜನೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಸರ್ವ ಶಿಕ್ಷಾ ಅಭಿಯಾನ, ರಾಷ್ಟ್ರೀಯ ಆರೋಗ್ಯ ಮಿಷನ್, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಪ್ರಧಾನ ಮಂತ್ರಿ ಉದ್ಯೋಗ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ನೀಲೇಶ್ವರಂ ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಮಾಧವನ್ ಮಣಿಯಾರ, ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಶಮೀನಾ ಟೀಚರ್, ವೆಸ್ಟ್ ಎಳ್ಳೇರಿ ಗ್ರಮ ಪಂಚಾಯತ್ ಅಧ್ಯಕ್ಷೆ ಗಿರಿಜಾ ಮೋಹನನ್ ಹಾಗೂ ಕೇಂದ್ರದಿಂದ ಆರಂಭಿಸಲಾದ ಯೋಜನೆಗಳ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು. ಬಡತನ ನಿರ್ಮೂಲನಾ ಇಲಾಖೆಯ ಯೋಜನಾ ನಿರ್ದೇಶಕ ಅಬ್ದುಲ್ ಜಲೀಲ್ ಸ್ವಾಗತಿಸಿದರು. ಕೆ.ವಿ.ಮುಹಮ್ಮದ್ ಮದನಿ ವಂದಿಸಿದರು.