ನವದೆಹಲಿ: ಪ್ರಧಾನಿ ಮೋದಿ ಅವರ ಡಿಗ್ರಿ ಬಗ್ಗೆ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಜು.07 ರಂದು ಅರ್ಜಿಯ ವಿಚಾರಣೆ ನಡೆಯಲಿದೆ. ಪ್ರಧಾನಿ ಮೋದಿ ಅವರ ಡಿಗ್ರಿ ವಿಷಯವಾಗಿ ಮಾಹಿತಿಯನ್ನು ಹುಡುಕುವುದಕ್ಕೆ ವಿಶ್ವವಿದ್ಯಾನಿಲಯಕ್ಕೆ ಕೇಂದ್ರ ಮಾಹಿತಿ ಆಯೋಗ ನೀಡಿದ್ದ ಸೂಚನೆಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ನೀಡಿದ್ದ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ನಡೆಸಲು ಹೈಕೋರ್ಟ್ ಒಪ್ಪಿಗೆ ನೀಡಿದೆ.
ವಿಶ್ವವಿದ್ಯಾನಿಲಯದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲ್ಲಿಸಿರುವಂತೆ ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಲ್ಲಿ ಅಥವಾ ವಿಶ್ವವಿದ್ಯಾನಿಲಯವು ಹೇಳಿಕೊಂಡಂತೆ ಸಾರ್ವಜನಿಕ ಡೊಮೇನ್‌ನಲ್ಲಿ ಮೋದಿಯವರ ಸ್ನಾತಕೋತ್ತರ ಪದವಿ ಲಭ್ಯವಿಲ್ಲ ಎಂದು ಕೇಜ್ರಿವಾಲ್ ತಮ್ಮ ಪರಿಶೀಲನಾ ಅರ್ಜಿಯಲ್ಲಿ ತಿಳಿಸಿದ್ದಾರೆ.