ಬದಿಯಡ್ಕ: ಪಾಂಚಜನ್ಯ ಸಾರ್ವಜನಿಕ ಗ್ರಂಥಾಲಯ ಹಾಗೂ ವಾಚನಾಲಯದ ಉದ್ಘಾಟನಾ ಕಾರ್ಯಕ್ರಮವು ಇಂದು(ಜೂನ್ 25) ಬೆಳಗ್ಗೆ 10.30ಕ್ಕೆ ಅಗಲ್ಪಾಡಿ ಜಯನಗರ ಪಾಂಚಜನ್ಯ ಸಾಂಸ್ಕøತಿಕ ಭವನದಲ್ಲಿ ಜರಗಲಿರುವುದು. ಪಾಂಚಜನ್ಯ ಸಾರ್ವಜನಿಕ ಗ್ರಂಥಾಲಯದ ಗೌರವ ಸಲಹೆಗಾರ ಮದುಸೂದನ್ ಆಯರ್ ಮಂಗಳೂರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಗ್ರಂಥಾಲಯದ ಗೌರವಾಧ್ಯಕ್ಷ ಬಾಬು ಮಾಸ್ತರ್ ಅಗಲ್ಪಾಡಿ ಪ್ರಾಸ್ತಾವಿಕ ನುಡಿಗಳನ್ನಾಡುವರು. ಅಧ್ಯಕ್ಷ ಅಚ್ಯುತ ಮಾಸ್ತರ್ ಅಗಲ್ಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕುಂಬ್ಡಾಜೆ ಗ್ರಾಮಪಂಚಾಯತಿ ಅಧ್ಯಕ್ಷ ಹಮೀದ್ ಪೊಸಳಿಗೆ, ಬದಿಯಡ್ಕ ಠಾಣಾಧಿಕಾರಿ ವಿನೋದ್ ಕುಮಾರ್, ರಾಜ್ಯಪ್ರಶಸ್ತಿ ವಿಜೇತ ಚಲನಚಿತ್ರ ನಟ, ರಂಗಭೂಮಿ ಶಿಕ್ಷಕ ಸದಾಶಿವ ರೈ ನೀನಾಸಂ, ರಾಜ್ಯ ಪ್ರಶಸ್ತಿ ವಿಜೇತೆ ಗ್ರಂಥಾಲಯ ಮೇಲ್ವಿಚಾರಕಿ ಮಂಡೆಕೋಲು ಸಾವಿತ್ರಿ ಕಣಿಮರಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ಜಿ. ಶರ್ಮ ಕೋಳಿಕ್ಕಜೆ, ಉಬ್ರಂಗಳ ಶ್ರೀ ಮಹಾದೇವ ಪಾರ್ವತೀ ಶ್ರೀ ಶಾಸ್ತಾರ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ ಕಿಶೋರ್ ಕುಣಿಕುಳ್ಳಾಯ, ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ತಲೇಕ, ಮವ್ವಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮೊಕ್ತೇಸರ ವಕೀಲ ನಾರಾಯಣ ಭಟ್, ಕುಂಬ್ಡಾಜೆ ಗ್ರಾಮಪಂಚಾಯಿತಿ ಸದಸ್ಯ ಹರೀಶ್ ಗೋಸಾಡ, ಮವ್ವಾರು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂಜೀವ ಶೆಟ್ಟಿ ಮೊಟ್ಟೆಕುಂಜ, ಕುಂಬ್ಡಾಜೆ ಗ್ರಾಮಪಂಚಾಯತಿ ಕಾರ್ಯದರ್ಶಿ ಹರೀಶ್, ನಾರಾಯಣ ಮಣಿಯಾಣಿ ಕಾಟುಕುಕ್ಕೆ, ಕಾಸರಗೋಡು ಸರ್ಕಾರಿ ಕಾಲೇಜಿನ ನಿವೃತ್ತ ಪಾಚಾರ್ಯ ಪ್ರೊ. ಎ.ಶ್ರೀನಾಥ್ ಕೊಲ್ಲಂಗಾನ, ಕೃಷಿಕ ಡಾ. ವೇಣುಗೋಪಾಲ್ ಕಳೆಯತ್ತೋಡಿ, ಅತಿಥಿಗಳಾಗಿ ಉಪಸ್ಥಿತರಿರುವರು. ನರಸಿಂಹ ಭಟ್ ಕಟ್ಟದಮೂಲೆ, ಚಂದ್ರಶೇಖರ ಭಟ್ ಏತಡ್ಕ, ಹರಿನಾರಾಯಣ ಮಾಸ್ತರ್ ಅಗಲ್ಪಾಡಿ, ನಿವೃತ್ತ ಜಿಲ್ಲಾ ಆರೋಗ್ಯ ಮತ್ತು ಶೈಕ್ಷಣಿಕ ಅಧಿಕಾರಿ ರಾಮಚಂದ್ರ ಪದ್ಮಾರು ಕಾರ್ಯಕ್ರಮಕ್ಕೆ ಶುಭಾಶಂಸನೆಗೈಯ್ಯುವರು. ಅಗಲ್ಪಾಡಿ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಗೌರವಾಧ್ಯಕ್ಷೆ ವಸಂತಿ ಟೀಚರ್ ಅಗಲ್ಪಾಡಿ, ಅಗಲ್ಪಾಡಿ ಯಾದವ ಸೇವಾಸಂಘದ ಅಧ್ಯಕ್ಷ ಸುಧಾಮ ಪದ್ಮಾರು ಉಪಸ್ಥಿತರಿರುವರು. ಪಾಂಚಜನ್ಯ ಸಾರ್ವಜನಿಕ ಗ್ರಂಥಾಲಯದ ಸಂಚಾಲಕ ರಾಜೇಶ್ ಮಾಸ್ತರ್ ಅಗಲ್ಪಾಡಿ, ಪ್ರಧಾನ ಸಂಚಾಲಕ ರಮೇಶ್ ಕೃಷ್ಣ ಪದ್ಮಾರು, ಸಹಸಂಚಾಲಕ ಉದಯ ಕುಮಾರ್ ಕಲ್ಲಕಟ್ಟ ನೇತೃತ್ವ ವಹಿಸುವರು.