ಮಂಜೇಶ್ವರ: ವರ್ಕಾಡಿ ಪಂಚಯಿತಿಯ ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನ ದಿನವನ್ನು ಆಚರಿಸಲಾಯಿತು. ಕೇರಳದ ಗ್ರಂಥಾಲಯ ಪಿತಾಮಹ ಪಿ. ಎನ್. ಪಣಿಕ್ಕರ್ ಅವರ ಚರಮ ದಿನವನ್ನು ವಾಚನಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಬರಹಗಾರ, ಮೀಯಪದವು ಉನ್ನತ ಪ್ರೌಢ ಶಾಲೆಯ ಪ್ರಾಧ್ಯಾಪಕ ಹರೀಶ್ ಜಿ ನಾಯಕ್ ಸಮಾರಂಭ ಉದ್ಘಾಟಿಸಿದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಜನರ್ದನ ಪೂಜಾರಿ ಕುಳೂರು, ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಸತ್ಯನಾರಾಯಣ ಶರ್ಮ ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. . ಶಾಲಾ ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಯೋಗೀಶ್ ಶೆಟ್ಟಿ ಪೆÇಯ್ಯೇಲ್, ಶತಮಾನೋತ್ಸವ ಸಮಿತಿ ಜತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು ಉಪಸ್ಥಿತರಿದ್ದರು.
ಈ ಸಂದರ್ಭ ಶಾಲಾ ಗ್ರಂಥಾಲಯ ಪುಸ್ತಕಗಳ ಪ್ರದರ್ಶನ ನಡೆಯಿತು. ವಾಚನ ದಿನಾಚರಣೆಯಂಗವಾಗಿ ಪ್ರತಿಜ್ಞೆಯನ್ನು ಶಿಕ್ಷಕಿ ಅಶ್ವಿನಿ ಎಂ ವಾಚಿಸಿದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸೌಮ್ಯ ಪಿ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಶಾಲಾ ಶಿಕ್ಷಕಿ ನಯನ ಎಂ ಸ್ವಾಗತಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ವೇತ ವಂದಿಸಿದರು.