ತಿರುವನಂತಪುರಂ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕ್ಯೂಬಾ ಭೇಟಿಯನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತೀವ್ರವಾಗಿ ಟೀಕಿಸಿದ್ದಾರೆ.
ಭೇಟಿ ಮೂಲಕ ಜನರ ಹಣ ಪೋಲು ಮಾಡಲಾಗುತ್ತಿದೆ ಎಂದರು. ಮುಖ್ಯಮಂತ್ರಿ ಮತ್ತು ಅವರ ತಂಡ ಕ್ಯೂಬಾಕ್ಕೆ ಹೋಗಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಿಗರೇಟ್ ಉತ್ಪಾದಿಸುವ ದೇಶಗಳೊಂದಿಗೆ ಆರೋಗ್ಯ ಸಹಕಾರವನ್ನು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಕೇರಳದಲ್ಲಿ ಉನ್ನತ ಶಿಕ್ಷಣ ರಂಗ ಕುಸಿದಿದ್ದು, ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ. ಕೇರಳದ ವಿದ್ಯಾರ್ಥಿಗಳು ಸುಸ್ತಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂದರು. ವಿಶ್ವವಿದ್ಯಾನಿಲಯಗಳಲ್ಲಿ ಅಸೋಸಿಯೇಟ್ ಪ್ರೊಪೆಸರ್ ಹುದ್ದೆಯಲ್ಲೂ ವಂಚನೆ ನಡೆಯುತ್ತಿರುವ ಕಾಲವಿದು ಎಂದು ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. ಕೇರಳದ ವಿಶ್ವವಿದ್ಯಾನಿಲಯಗಳಲ್ಲಿ ಕಾನೂನುಗಳು ಮುರಿದುಹೋಗಿವೆ ಮತ್ತು ಈಗ ಸಂವಿಧಾನವು ಬಿಕ್ಕಟ್ಟಿನಲ್ಲಿದೆ ಎಂದು ರಾಜ್ಯಪಾಲರು ಹೇಳಿರುವರು.