ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
"ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಲಂಚ ಪಡೆದ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ರಾಜ್ಯಪಾಲರು ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ" ಎಂದು ತಮಿಳುನಾಡು ರಾಜಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಸೆಂಥಿಲ್ ಬಾಲಾಜಿ ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.