ಕಾಸರಗೋಡು: ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾಸರಗೋಡಿಗೆ ಆಗಮಿಸಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕರು ಹಾಗೂ ಇತರ ಗಣ್ಯರನ್ನು ಕಾಸರಗೋಡು ಕನ್ನಡಭವನ ವತಿಯಿಂದ ಗೌರವಿಸಲಾಯಿತು.
ಕನ್ನಡ ಭವನ ಸ್ಥಾಪಕಾಧ್ಯಕ್ಷ ವಾಮನರಾವ್ ಬೇಕಲ್ ಮತ್ತು ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್ ಸ್ಮರಣಿಕೆ ನೀಡಿ ಗೌರವಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕ ವಿಶ್ವನಾಥ ಹಿರೇಮಠ್, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಖ್ಯಾತ ಸಾಹಿತಿ, ವಿದ್ವಾಂಸ ಪ್ರೊ. ಕೆ.ಇ ರಾಧಾಕೃಷ್ಣ, ಪ್ರೊ. ರಮಾದೇವಿ ಬೆಂಗಳೂರು, ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಅವರನ್ನು ಶಾಲುಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ಕಾರ್ಯದರ್ಶಿ ಅಖಿಲೇಶ್ ನಗುಮುಗಂ, ಜೆಡ್.ಎ ಕಯ್ಯರ್ ಉಪಸ್ಥಿತರಿದ್ದರು. ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕಾಸರಗೋಡು ಜಿಲ್ಲಾ ಘಟಕ ಅಧ್ಯಕ್ಷ ಎ.ಆರ್ ಸುಬ್ಬಯ್ಯಕಟ್ಟೆ ಸ್ವಾಗತಿಸಿ ಅಭಿನಂದನಾ ಭಾಷಣ ಮಾಡಿದರು.