ಉಪ್ಪಳ: ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಪರಿವರ್ತನೆ ಕಂಡುಕೊಳ್ಳಲು ಸಾಧ್ಯ ಎಂದು ನಿಟ್ಟೆ ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಎಂ ಎಸ್ ಮೂಡಿತ್ತಾಯ ತಿಳಿಸಿದ್ದಾರೆ. ಅವರು ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಸಂಸ್ಕಾರಯುತ ಶಿಕ್ಷಣದಿಂದ ಜೀವನ ಮೌಲ್ಯ ರೂಪಿಸಿಕೊಳ್ಳಲು ಸಾಧ್ಯ. ಅಂತಹ ಶಿಕ್ಷಣ ಪ್ರಶಾಂತಿ ವಿದ್ಯಾಕೇಂದ್ರದಂತಹ ಶಿಕ್ಷಣ ಸಂಸ್ಥೆಗಳಿಂದ ಲಭಿಸುತ್ತಿರುವುದಾಘಿ ತಿಳಿಸಿದರು.
ಶ್ರೀಸತ್ಯಸಾಯಿ ಸೇವಾಸಂಸ್ಥೆಗಳ ಉತ್ತರ ಕರ್ನಾಟಕ ಅಧ್ಯಕ್ಷ ಪದ್ಮನಾಭ ಪೈ, ಮಂಗಳೂರಿನ ಕ್ಯಾಂಪೆÇ್ಕೀ ಸಂಸ್ಥೆಯ ನಿರ್ದೇಶಕ ಡಾ. ಜಯಪ್ರಕಾಶ್‍ನಾರಾಯಣ ತೊಟ್ಟೆತ್ತೊಡಿ, . ಸಂಸ್ಥೆಯ ಹಳೇ ವಿದ್ಯಾರ್ಥಿ ಡಾ. ಸುನಿಲ್ ಐ.ಎಚ್, ಪ್ರಶಾಂತಿ ಸೇವಾಟ್ರಸ್ಟ್‍ನ ಅಧ್ಯಕ್ಷ ಐ.ವಿ ಭಟ್, ಪ್ರಶಾಂತಿ ಸೇವಾ ಟ್ರಸ್ಟ್‍ನ ಉಪಾಧ್ಯಕ್ಷ ಪೆಲತ್ತಡ್ಕ ರಾಮಕೃಷ್ಣ ಭಟ್,ಕೋಶಾಧಿಕಾರಿ ಮಾಣಿಪ್ಪಾಡಿ ನಾರಾಯಣ ಭಟ್, ಹಿರಿಯ ಸದಸ್ಯ ಪಿ ಸದಾಶಿವ ಭಟ್, ವಕೀಲ ರಾಮಚಂದ್ರ ಭಟ್ ವೇದಿಕೆ ಉಪಸ್ಥಿತರಿದ್ದರು. ಈ ಸಂದರ್ಭ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಹೆಸರನ್ನು ಪ್ರಶಾಂತಿ ಸೇವಾ ಟ್ರಸ್ಟ್ ನ ಸಲಹಾ ಸಮಿತಿಯ ಸದಸ್ಯ ಪ್ರಮೋದ್ ಅವರು ವಾಚಿಸಿದರು. ಶಾಲಾ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಹಿರಣ್ಯ ಮಹಾಲಿಂಗಭಟ್ ಸ್ವಾಗತಿಸಿದರು. ಆಂಗ್ಲ ಶಿಕ್ಷಕ ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಪ್ರಾಂಶುಪಾಲ ವಾಮನನ್ ವಂದಿಸಿದರು.