ಕಾಸರಗೋಡು: ನರೇಂದ್ರ ಮೋದಿ ಸರ್ಕಾರದ ಒಂಬತ್ತನೇ ವರ್ಷಾಚರಣೆಯ ಅಂಗವಾಗಿ ಬಿಜೆಪಿ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಯೋಜನೆ ಫಲಾನುಭವಿಗಳ ಸಭೆಯು ಜೋಡುಕಲ್ ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಜರುಗಿತು.
ಬಿಜೆಪಿ ಜಿಲ್ಲಾ ಅಧ್ಯಕ್ಷ ರವೀಶ ತಂತ್ರಿ ಸಮಾರಂಭ ಉದ್ಘಾಟಿಸಿದರು. ಬಿಜೆಪಿ ಮಂಜೇಶ್ವರ ಮಂಡಲದ ಅಧ್ಯಕ್ಷ ಆದರ್ಶ್ ಬಿ.ಎಂ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್, ಕುಂಬಳೆ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್ ಮೈಯ್ಯ, ಬ್ಲಾಕ್ ಪಂಚಾಯತ್ ಸದಸ್ಯರಾದ ರಾಧಾಕೃಷ್ಣ ಭಟ್, ಚಂದ್ರಾವತಿ ಶೆಟ್ಟಿ, ಪೈವಳಿಕೆ ಪಂಚಾಯತ್ ಸಮಿತಿ ಉಪಾಧ್ಯಕ್ಷೆ ಪುಷ್ಪಲಕ್ಷ್ಮಿ, ಪೈವಳಿಕೆ ಉತ್ತರ ವಲಯ ಅಧ್ಯಕ್ಷ ಲೋಕೇಶ್ ನೋಂಡ ಉಪಸ್ಥಿತರಿದ್ದರು.
ಕೃಷಿಕ ಮೋರ್ಚಾ ಮಂಜೇಶ್ವರ ಮಂಡಲ ಸಮಿತಿ ಅಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಚಾಲಕ ಸದಾಶಿವ ಚೇರಾಲ್ ಸ್ವಾಗತಿಸಿದರು. ಬಿಜೆಪಿ ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಪಿ.ಅನಿಲ್‍ಕುಮಾರ್ ವಂದಿಸಿದರು.