ಪೆರ್ಲ: ಶೇಣಿ ಶ್ರೀಶಾರದಾಂಬ ವಿದ್ಯಾ ಸಂಸ್ಥೆಯ ಹೈಸ್ಕೂಲ್ ವಿಭಾಗಕ್ಕೆ ನೂತನವಾಗಿ ನಿರ್ಮಿಸಿದ ಅಡುಗೆ ತಯಾರಿಯ ಕಟ್ಟಡ ಸಮುಚ್ಛಯವನ್ನು ಶುಕ್ರವಾರ ಉದ್ಘಾಟಿಸಲಾಯಿತು. ಎಣ್ಮಕಜೆ ಗ್ರಾ.ಪಂ. ಅಧ್ಯಕ್ಷ ಸೋಮಶೇಖರ್ ಜೆ.ಎಸ್. ನೂತನ ಅಡುಗೆ ತಯಾರಿ ಕೇಂದ್ರವನ್ನು ಉದ್ಘಾಟಿಸಿದರು. ಎಣ್ಮಕಜೆ ಗ್ರಾ.ಪಂ. ಶಿಕ್ಷಣ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಕುಲಾಲ್ ಸಭೆಯ ಅಧ್ಯಕ್ಷತೆವಹಿಸಿದ್ದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ ಎಂ. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಎಣ್ಮಕಜೆ ಗ್ರಾಮ ಪಂ.ಸದಸ್ಯ ರಾಧಾಕೃಷ್ಣ ನಾಯಕ್ ಶೇಣಿ, ಪಂ.ಸದಸ್ಯೆ ಝರೀನಾ ಮುಸ್ತಾಫ, ಶ್ರೀಶಾರದಾಂಬ ಹೈಯರ್ ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ಕೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಲ್ಸನ್ ಡಿ.ಸೋಜ, ಮಾತೃಸಂಘದ ಅಧ್ಯಕ್ಷೆ ಸುಮತಿ, ಶಾಲಾ ಪ್ರಬಂಧಕಿ ಶಾರದ ವೈ,ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರನಾಥ ನಾಯಕ್ ಶೇಣಿ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಈ ಬಾರಿಯ ಎಸ್ಸಸೆಲ್ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎಪ್ಲಸ್ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಶ್ರೀಶ ಕುಮಾರ್ ಎಂ.ಪಿ.ಸ್ವಾಗತಿಸಿ ಸ್ಟಾಫ್ ಸೆಕ್ರಟರಿ ಗೀತಾ ಬಿ.ಆರ್. ವಂದಿಸಿದರು.ಶಿಕ್ಷಕಿ ದಿವ್ಯಾ ಎಂ ನಿರೂಪಿಸಿದರು.