ತಿರುವನಂತಪುರಂ: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಮತ್ತು ಇಲಿ ಜ್ವರ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸುವಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕರೆ ನೀಡಿದ್ದಾರೆ.
ಕೇರಳದಲ್ಲಿ ಜ್ವರ ಪೀಡಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಜ್ವರದ ಸಂದರ್ಭದಲ್ಲಿ ಸ್ವಯಂ-ಔಷÀಧಿ ಮಾಡಬೇಡಿ ಎಂದು ಆರೋಗ್ಯ ಸಚಿವರು ಎಚ್ಚರಿಕೆ ನೀಡಿದರು.
‘‘ರಾಜ್ಯದ ಆಸ್ಪತ್ರೆಗಳಲ್ಲಿ ಸೌಲಭ್ಯ ಹೆಚ್ಚಿಸಲಾಗಿದೆ. ಆರೋಗ್ಯ ಕಾರ್ಯಕರ್ತರಿಗೆ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಕೇರಳದಲ್ಲಿ ಜ್ವರ ಪೀಡಿತರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ ಎಂದು ಆರೋಗ್ಯ ಇಲಾಖೆ ಈಗಾಗಲೇ ಮೇ ತಿಂಗಳಿನಲ್ಲಿ ಮೌಲ್ಯಮಾಪನ ಮಾಡಿತ್ತು. ಆಂಟಿ ರೇಬಿಸ್ ಔಷÀಧಿಗಳಲ್ಲಿ ಯಾವುದೇ ಲೋಪವಾಗಬಾರದು ಎಂದಿರುವರು.
ಡೆಂಗ್ಯೂ ಹೆಚ್ಚು ಹರಡಿರುವ ಸ್ಥಳಗಳಲ್ಲಿ ವಿಶೇಷ ಪರೀಕ್ಷೆಗಳನ್ನು ನಡೆಸಲಾಗುವುದು. ಪ್ರಕರಣಗಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲಷಿಲಿಜ್ವರ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಜಾಗರೂಕರಾಗಿರಿ. ಮನೆಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಪರಿಸ್ಥಿತಿ ಎಂದಿಗೂ ಬರಬಾರದು. ಮನೆ ಮತ್ತು ಸಂಸ್ಥೆಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವರು ಹೇಳಿದರು.