ಸಹರಾನ್ಪುರ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ ನಡೆದಿದೆ.
ಸಹರಾನ್‌ಪುರದ ದಿಯೋಬಂದ್‌ನಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಈ ಗುಂಡು ಹಾರಿಸಲಾಗಿದೆ. ಈ ಗುಂಡಿನ ದಾಳಿಯಲ್ಲಿ ಚಂದ್ರಶೇಖರ್ ಆಜಾದ್ ಸ್ವಲ್ಪದರಲ್ಲೇ ಬದುಕುಳಿದಿದ್ದಾರೆ. ಆದರೆ, ಈ ಬುಲೆಟ್ ಚಂದ್ರಶೇಖರ್ ಆಜಾದ್ ಅವರಿಗೆ ತಗುಲಿ ಹೊರಬಂದಿದೆ. ಸದ್ಯ ಚಂದ್ರಶೇಖರ್ ಆಜಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಂದ್ರಶೇಖರ್ ಆಜಾದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುಂಡಿನ ದಾಳಿ ಬಗ್ಗೆ ಎಸ್‌ಎಸ್‌ಪಿ ಡಾ.ವಿಪಿನ್ ತಾಡಾ ಮಾತನಾಡಿ, ಅರ್ಧ ಗಂಟೆಯ ಹಿಂದೆ ಕೆಲವು ಕಾರಿನಲ್ಲಿ ಬಂದ ಶಸ್ತ್ರಸಜ್ಜಿತ ವ್ಯಕ್ತಿಗಳು ಚಂದ್ರಶೇಖರ್ ಆಜಾದ್ ಅವರ ಬೆಂಗಾವಲು ಪಡೆಯ ಮೇಲೆ ಗುಂಡು ಹಾರಿಸಿದ್ದಾರೆ. ಒಂದು ಗುಂಡು ಅವರ ದೇಹಕ್ಕೆ ತಗುಲಿ ಹಾದುಹೋಗಿದೆ. ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗಾಗಿ ಸಿಎಚ್‌ಸಿಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.