ಪೆರ್ಲ: ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಮಂಜೇಶ್ವರ ತಾಲೂಕಿನ ಪೆರ್ಲ ವಲಯದಲ್ಲಿ ನಡೆಸಿದ್ದು ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳು ಯೋಜನೆ ಕಾರ್ಯಕ್ರಮದ ಬಗ್ಗೆ, ಮಾದಕ ವಸ್ತುಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕ ಕಮಲಾಕ್ಷ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು, ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ಉಪಸ್ಥಿತರಿದ್ದು ಮಾಹಿತಿ ನೀಡಿ ಕಾರ್ಯಕ್ರಮ ದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು, ಜನಜಾಗೃತಿ ಸದಸ್ಯ ಬಿ.ಪಿ.ಶೇಣಿ ಹಿತ ನುಡಿಗಳನ್ನಾಡಿದರು.ಒಕ್ಕೂಟ ಅಧ್ಯಕ್ಷ ಶ್ರೀಧರ ಮಣಿಯಾಣಿ ಅಧ್ಯಕ್ಷತೆ ವಹಿಸಿದ್ದರು. ವಲಯ ಮೇಲ್ವಿಚಾರಕರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸೇವಾಪ್ರತಿನಿಧಿ ಶಶಿಕಲಾ, ವಿಜಯಕುಮಾರಿ ಉಪಸ್ಥಿತರಿದರು.