ಉಪ್ಪಳ: ಬಿಜೆಪಿ ಸರ್ಕಾರದ ಒಂಬತ್ತನೇ ವμರ್Áಚರಣೆ ಭಾಗವಾಗಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಹಿರಿಯ ಕಾರ್ಯಕರ್ತರ ಸಮಾವೇಶ ಮಂಗಲ್ಪಾಡಿ ಪ್ರತಾಪನಗರ ಗೌರಿಗಣೇಶ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು.
ಬಿಜೆಪಿ ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇರಳ ರಾಜ್ಯ ಉಪಾಧ್ಯಕ್ಷ ಎ.ಎನ್ ರಾಧಾಕೃಷ್ಣನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸ್ವರ್ಗೀಯ ಡಾ.ಪ್ರಸಾದ್ ಮುಖರ್ಜಿ ಅವರ ಸ್ಮೃತಿ ದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು ಕಾರ್ಯಕ್ರಮದಲ್ಲಿ ಬಿಜೆಪಿ ಕೇರಳ ರಾಜ್ಯ ಕಾರ್ಯದರ್ಶಿ ರಂಜಿತ್ ಕಣ್ಣೂರು, ಕಾಸರಗೋಡು ಜಿಲ್ಲಾ ಅಧ್ಯಕ್ಷ ರವೀಶ ತಂತ್ರಿ ಕುಂಟಾರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ರೈ, ರಾಜ್ಯ ಸಮಿತಿ ಸದಸ್ಯ ಕೋಳಾರು ಸತೀಶ್ಚಂದ್ರ ಭಂಡಾರಿ, ಉತ್ತರ ವಲಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಶೆಟ್ಟಿ ಪೂಕಟ್ಟೆ, ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ಕೆ ಕಯ್ಯಾರು, ಮಹಿಳಾ ಮೋರ್ಚಾ ರಾಷ್ಟ್ರೀಯ ಸಮಿತಿ ಸದಸ್ಯೆ ಅಶ್ವಿನಿ ಎಂ.ಎಲ್, ಜಿಲ್ಲಾ ಉಪಾಧ್ಯಕ್ಷ ಸುಧಾಮ ಗೋಸಾಡ, ಯುವಮೋರ್ಚಾ ರಾಜ್ಯ ಉಪಾಧ್ಯಕ್ಷೆ ಅಂಜು ಜೋಸ್ಟಿ, ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ಹಿರಿಯರಾದ ಅಶೋಕ್ ಕುಮಾರ್ ಹೊಳ್ಳ ಮತ್ತು ಮಂಜೇಶ್ವರ ವಿಧಾನಸಭಾ ವ್ಯಾಪ್ತಿಯ ಹಿರಿಯ ಕಾರ್ಯಕರ್ತರು ಭಾಗವಹಿಸಿದ್ದರು. ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್ ಮಯ್ಯ ಸ್ವಾಗತಿಸಿ, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ವಂದಿಸಿದರು. ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಮಣಿಯನಂಪಾರೆ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು.