ಪೆರ್ಲ: ಬಿಜೆಪಿ ಎಣ್ಮಕಜೆ ಪಂಚಾಯಿತಿ ಸಮಿತಿ ವತಿಯಿಂದ ನಡೆಯಲಿರುವ ಕೃಷಿಕರ ಸಮಾವೇಶದ ಪೂರ್ವಭಾವಿ ಸ್ವಾಗತ ಸಮಿತಿ ಸಭೆ ಪೆರ್ಲದಲ್ಲಿರುವ ಪಕ್ಷದ ಕಛೇರಿಯಲ್ಲಿ ಜರುಗಿತು.
ಭಾರತೀಯ ಜನತಾ ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷ ರವೀಶ್ ತಂತ್ರಿ ಕುಂಟಾರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಕೆ. ಪಿ.ಅತಿಥಿಯಾಗಿ ಭಾಗವಹಿಸಿದ್ದರು. ಪಂಚಾಯತ್ ಸಮಿತಿ ಅಧ್ಯಕ್ಷರಾದ ಸುಮಿತ್ ರಾಜ್. ಎ.ಸಿ. ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಉಷಾ ಗಣೇಶ್, ಇಂದಿರಾ.ಎಚ್, ಆಶಾಲತಾ ನಲ್ಕ, ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣ ನಾಯ್ಕ್ ಅಡ್ಕಸ್ಥಳ ಉಪಸ್ಥಿತರಿದ್ದರು. ಕೃಷಿಕರ ಸಮಾವೇಶದ ಯಶಸ್ವಿಗಾಘಿ ಸಮಿತಿ ರಚಿಸಲಾಯಿತು. ನಿವೃತ್ತ ಮುಖ್ಯ ಶಿಕ್ಷಕ, ಪ್ರಗತಿಪರ ಕೃಷಿಕ ಸದಾನಂದ ಮಾಸ್ಟರ್ ಕುದ್ವ ಇವರನ್ನು ಅಧ್ಯಕ್ಷ ರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಾರಾಯಣ ಪ್ರಸಾದ್ ಕೂಟೆಲು ಇವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಪಕ್ಷದ ಕಾರ್ಯಕರ್ತರು, ಕೃಷಿಕ ಬಂಧು ಗಳು ಉಪಸ್ಥಿತರಿದ್ದರು. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜೂ. 30ರಂದು ಕೃಷಿಕರ ಸಮಾವೇಶ ಆಯೋಜಿಸಲಾಗುತ್ತಿದೆ.