ಕಣ್ಣೂರು: ಕಣ್ಣೂರು-ಆಲಪ್ಪುಳ ಎಕ್ಸಿಕ್ಯೂಟಿವ್ ಎಕ್ಸ್‍ಪ್ರೆಸ್‍ನ ಬೋಗಿಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಇದಕ್ಕೂ ಮುನ್ನ ಠಾಣೆ ಬಳಿ ಬೆಂಕಿ ಹಚ್ಚಿದ ವ್ಯಕ್ತಿ ಬಂಧನದಲ್ಲಿದ್ದಾನೆ. ಟ್ರಾಕ್ ಬಳಿಯೇ ಕಾಣಿಸಿಕೊಂಡಿರುವುದಾಗಿ ಹೇಳಿಕೆ ಸಿಕ್ಕಿದೆ. ಇದರ ಆಧಾರದ ಮೇಲೆ ಕಣ್ಣೂರು ಟೌನ್ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ವ್ಯಕ್ತಿಯನ್ನು ಪೆÇಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ವ್ಯಕ್ತಿಯೊಬ್ಬ ದೊಡ್ಡ ಡಬ್ಬಿಯೊಂದಿಗೆ ರೈಲಿಗೆ ಪ್ರವೇಶಿಸಿದ ಸಿಸಿಟಿವಿ ದೃಶ್ಯಾವಳಿ ಪೊಲೀಸರಿಗೆ ಸಿಕ್ಕಿತ್ತು. ದೃಶ್ಯಾವಳಿ ಆಧರಿಸಿ ತನಿಖೆ ನಡೆಸಿದಾಗ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ನಿಂತಿದ್ದ ರೈಲಿನ ಜನರಲ್ ಕಂಪಾರ್ಟ್ ಮೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೊನ್ನೆ ಬೆಳಗಿನ ಜಾವ 1.30ಕ್ಕೆ ಈ ಘಟನೆ ನಡೆದಿದೆ. ಪ್ರಯಾಣಿಕರನ್ನು ಕೆಳಗಿಳಿಸಿ ರೈಲು ಪ್ಲಾಟ್‍ಫಾರ್ಮ್ ನಲ್ಲಿ ನಿಲುಗಡೆಗೊಳಿಸಿದ್ದ ವೇಳೆ ಬೆಂಕಿ ಹಚ್ಚಲಾಗಿತ್ತು.