ನೋಯ್ಡಾ: ಅಂತರರಾಷ್ಟ್ರೀಯ ಯೋಗ ದಿನದಂದು ಗ್ರೇಟರ್ ನೋಯ್ಡಾದಲ್ಲಿ ಚಲಿಸುತ್ತಿರುವ ಗೂಡ್ಸ್ ರೈಲಿನ ಮೇಲೆ ನಿಂತು ರೀಲ್ಸ್‌ಗೆ ಫೋಸ್ ನೀಡಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಬಂಧಿಸಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಸಣ್ಣ ನದಿಯೊಂದರ ಸೇತುವೆ ಮೇಲೆ ಹಾದುಹೋಗುತ್ತಿರುವಾಗ 19 ಮತ್ತು 22 ವರ್ಷ ವಯಸ್ಸಿನ ಇಬ್ಬರು ಯುವಕರು ರೈಲಿನ ಮೇಲೆ ನಿಂತು ತಮ್ಮ ಅಂಗಸೌಷ್ಟವ ಪ್ರದರ್ಶಿಸಿದ್ದರು. ಈ ವಿಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.
'ಗೂಡ್ಸ್ ರೈಲಿನ ಮೇಲೆ ಇಬ್ಬರು ಯುವಕರು ಸ್ಟಂಟ್ ಮಾಡುತ್ತಿದ್ದ ವಿಡಿಯೊ ಹರಿದಾಡಿದ ಬೆನ್ನಲ್ಲೇ ಅವರಿಬ್ಬರನ್ನೂ ಆರ್‌ಪಿಎಫ್ ಪೊಲೀಸರು ಬಂಧಿಸಿದ್ದಾರೆ' ಎಂದು ಪೊಲೀಸ್ ವಕ್ತಾರ ತಿಳಿಸಿದ್ದಾರೆ.
'ಯುವಕರಿಬ್ಬರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ಧಿ ಪಡೆಯಲು ಈ ರೀತಿಯ ವಿಡಿಯೊ ಮಾಡಿದ್ದಾಗಿ ತಿಳಿಸಿದ್ದಾರೆ' ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.