ಬಾಲಸೋರ್: ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ನಡೆದ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಬಾಲಸೋರ್: ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ನಡೆದ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಬಳಿಕ ಕಟಕ್ ಆಸ್ಪತ್ರೆಗೆ ತೆರಳಲಿರುವ ಪ್ರಧಾನಿ ಮೋದಿ, ಗಾಯಾಳುಗಳನ್ನು ಭೇಟಿ ಮಾಡಲಿದ್ದಾರೆ.
ಇದಕ್ಕೂ ಮೊದಲು ಭೀಕರ ರೈಲು ಅವಘಡಕ್ಕೆ ಸಂಬಂಧ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು.
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಸಂಭವಿಸಿದ ಅವಘಡದಲ್ಲಿ 250ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಕನಿಷ್ಠ 900 ಮಂದಿ ಗಾಯಗೊಂಡಿದ್ದಾರೆ.
ದುರ್ಘಟನೆಯ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆಗೆ ಪೊಲೀಸರು, ಎನ್‌ಡಿಆರ್‌ಎಫ್, ವಾಯುಪಡೆ ಮತ್ತು ಸ್ಥಳೀಯರು ನೇತೃತ್ವ ವಹಿಸಿದ್ದಾರೆ.