ಉಪ್ಪಳ: ಬಾಯಾರಿನ ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ನಡೆಸಲಾಯಿತು. ಸಮಾರಂಭದಲ್ಲಿ ಹಮೀದ್ ಕಞËಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ,
ಯೋಗದಿಂದ ನಮ್ಮ ದೇಹವನ್ನು ಆರೋಗ್ಯವನ್ನು ಸುಸ್ಥಿತಿಯಲ್ಲಿರಿಸಲು ಸಾಧ್ಯ. ಜಾತಿ ಮತ ಭೇಧವಿಲ್ಲದೆ ಯೋಗವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸದೃಢ ಸಮಾಜವನ್ನು ಕಟ್ಟಲು ಸಾಧ್ಯ ಎಂದು ತಿಳಿಸಿದರು.
ಪ್ರಶಾಂತಿ ಸೇವಾ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಹಿರಣ್ಯ ಮಹಾಲಿಂಗ ಭಟ್ ರವರು ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಸಲಾಯಿತು. ಪ್ರಶಾಂತಿ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ಪೆಲತಡ್ಕ ರಾಮಕೃಷ್ಣ ಭಟ್, ಶಾಲಾ ಮಾರ್ಗದರ್ಶಕ ಕೃಷ್ಣ ನಾಯಕ್, ನಿಲಯ ಪಾಲಕ ಕೃಷ್ಣ ಪ್ರಸಾದ್, ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲ ವಾಮನನ್ ಸ್ವಾಗತಿಸಿದರು. ಶಿಕ್ಷಕ ಶ್ರೀಕಾಂತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.