ಕೊಲ್ಲಂ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಒಂದೂವರೆ ವರ್ಷದ ಮಗಳನ್ನು ಮನೆಯಿಂದ ಹೊರಗಡೆ ಎಸೆದಿರುವ ದಾರುಣ ಘಟನೆ ಕೇರಳದ ಕೊಲ್ಲಂನ ಕುರವನ್‌ಪಾಲಂನಲ್ಲಿ ನಡೆದಿದೆ.
ಕೊಲ್ಲಂ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಒಂದೂವರೆ ವರ್ಷದ ಮಗಳನ್ನು ಮನೆಯಿಂದ ಹೊರಗಡೆ ಎಸೆದಿರುವ ದಾರುಣ ಘಟನೆ ಕೇರಳದ ಕೊಲ್ಲಂನ ಕುರವನ್‌ಪಾಲಂನಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಮಗುವಿನ ಪೋಷಕರಾದ ತಮಿಳುನಾಡು ಮೂಲದ ಮುರುಕನ್ (35) ಮತ್ತು ಮರಿಯಮ್ಮ (23) ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ತಮ್ಮ ಬಾಡಿಗೆ ಮನೆಯಲ್ಲಿ ಮದ್ಯಪಾನ ಮಾಡುತ್ತಿದ್ದ ದಂಪತಿಗಳು ಭಾನುವಾರ ರಾತ್ರಿ ಜಗಳವಾಡಿದ್ದಾರೆ. ಅಷ್ಟರಲ್ಲಿ ಅವರ ಮಗಳು ಅವರತ್ತ ಬಂದಿದ್ದು, ಈ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ತಂದೆ ಸಿಟ್ಟಿಗೆದ್ದು ಹೊರಕ್ಕೆ ಎಸೆದಿದ್ದಾನೆ. ಪೋಷಕರ ನಡುವೆ ನಡೆದ ಜಗಳದಲ್ಲಿ ಮಗುವಿಗೆ ಗಂಭೀರ ಗಾಯಗಳಾಗಿದ್ದು, ಮಗುವನ್ನು ತಿರುವನಂತಪುರದ ಆಸ್ಪತ್ರೆಗೆ ರವಾನಿಸಲಾಗಿದೆ.
ಮಗು ನೆಲಕ್ಕೆ ಎಸೆದ ನಂತರ ಗಾಯಗೊಂಡಿದೆಯೇ ಅಥವಾ ಆಕಸ್ಮಿಕವಾಗಿ ಬಿದ್ದಿದೆಯೇ ಎಂದು ಖಚಿತಪಡಿಸಿಕೊಳ್ಳಲು ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.