ಕೊಲಂಬೊ: ಸಮುದ್ರ ಗಡಿ ದಾಟಿ ಅಕ್ರಮವಾಗಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ 15 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ರಾತ್ರಿ ಬಂಧಿಸಿದೆ.
ಕೊಲಂಬೊ: ಸಮುದ್ರ ಗಡಿ ದಾಟಿ ಅಕ್ರಮವಾಗಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ 15 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ರಾತ್ರಿ ಬಂಧಿಸಿದೆ.
'ಶ್ರೀಲಂಕಾದ ಡೆಲ್ಫ್ಟ್ ದ್ವೀಪದಲ್ಲಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಶನಿವಾರ ರಾತ್ರಿ ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು.
'ಬಂಧಿತ 15 ಮೀನುಗಾರರನ್ನು ಕಂಕಸಂತುರೈ ಬಂದರಿಗೆ ಕಳುಹಿಸಿಲಾಗಿದೆ. ಮೀನುಗಾರರ 2 ಟ್ರಾಲರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮಗಳಿಗಾಗಿ ಈ ಪ್ರಕರಣವನ್ನು ಮೈಲಾಡಿ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗಿದೆ' ಎಂದು ಪ್ರಕಟಣೆ ತಿಳಿಸಿದೆ.
ಕಳೆದ ತಿಂಗಳು ತಮಿಳುನಾಡು ಮೂಲದ 22 ಮೀನುಗಾರರನ್ನು ಶೀಲಂಕಾ ನೌಕಾಪಡೆ ಬಂಧಿಸಿತ್ತು. ವರ್ಷದ ಆರಂಭದಿಂದ ಇಲ್ಲಿಯವರೆಗೆ ಶ್ರೀಲಂಕಾ ನೌಕಾಪಡೆ 74 ಭಾರತೀಯ ಮೀನುಗಾರರನ್ನು ಬಂಧಿಸಿದೆ. 12 ಟ್ರಾಲರ್‌ಗಳನ್ನು ಪಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.