ಪುಣೆ: ಪ್ರಧಾನಿ ನರೇಂದ್ರ ಮೋದಿ ಆ.1 ರಂದು ಪುಣೆಗೆ ಭೇಟಿ ನೀಡಲಿದ್ದು, ದಗ್ದುಶೇಠ್ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ.
ಈ ಬಳಿಕ ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಹಾಗೂ ಆ ನಂತರ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12:45 ಕ್ಕೆ ಪ್ರಧಾನಿ ಮೋದಿ ಮೆಟ್ರೋ ರೈಲಿಗೆ ಚಾಲನೆ ನೀಡಲಿದ್ದಾರೆ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪುಣೆ ಮೆಟ್ರೋ ಮೊದಲ ಹಂತದ ಎರಡು ಕಾರಿಡಾರ್ ನಲ್ಲಿ ಫುಗೆವಾಡಿ ನಿಲ್ದಾಣದಿಂದ ಸಿವಿಲ್ ಕೋರ್ಟ್ ಸ್ಟೇಷನ್ ಮತ್ತು ಗಾರ್ವೇರ್ ಕಾಲೇಜು ನಿಲ್ದಾಣದಿಂದ ರೂಬಿ ಹಾಲ್ ಕ್ಲಿನಿಕ್ ಸ್ಟೇಷನ್ ವರೆಗಿನ ಮೆಟ್ರೋ ರೈಲಿಗೆ ನಾಳೆ ಚಾಲನೆ ಸಿಗಲಿದೆ.
ಈ ಮಾರ್ಗದ ಮೆಟ್ರೋ ನಿಲ್ದಾಣಗಳಿಗೆ 2016 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಶಂಕುಸ್ಥಾಪನೆ ನೆರವೇರಿಸಿದ್ದರು.