HEALTH TIPS

2024ರ ಲೋಕಸಭೆ ಚುನಾವಣೆ: ತಮಿಳುನಾಡಿನಿಂದ ಪ್ರಧಾನಿ ಮೋದಿ ಸ್ಪರ್ಧೆ?

            ನವದೆಹಲಿ: 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮತ್ತು ವಾರಣಾಸಿಯಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಮುಂಚೂಣಿಗೆ ತರುವ ಉದ್ದೇಶದಿಂದ ಪ್ರಧಾನಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

                  ಮೋದಿ ಅವರು ತಮಿಳುನಾಡಿನಿಂದಲೂ ಸ್ಪರ್ಧಿಸಿದರೆ ಆಶ್ಚರ್ಯವೇನಿಲ್ಲ.  ತಮಿಳುನಾಡಿನ ಜೊತೆ ಅವರ ರಾಜಕೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೆಲವು ತಿಂಗಳ ಹಿಂದೆ ಅ ಕಾಶಿ-ತಮಿಳು ಸಂಗಮಮ್ ಕಾರ್ಯಕ್ರಮ ನಡೆಸಲಾಯಿತು ಎಂದು ಹಿರಿಯ ರಾಜಕೀಯ ವಿಶ್ಲೇಷಕ ಪಿ ಕೆ ಡಿ ನಂಬಿಯಾರ್ ವಿಶ್ಲೇಷಿಸಿದ್ದಾರೆ. ಮೋದಿಯವರು ಕನ್ಯಾಕುಮಾರಿಯಿಂದ ಸ್ಪರ್ಧಿಸಿದರೆ, ಕಾಶಿ ಮತ್ತು ಕನ್ಯಾಕುಮಾರಿ ನಡುವಿನ ಬಲವಾದ ಸಾಂಸ್ಕೃತಿಕ ಸಂಬಂಧವು ಕಾರ್ಯರೂಪಕ್ಕೆ ಬರುತ್ತದೆ ಎಂಬುದು ಮತ್ತೊಂದು ಅಭಿಪ್ರಾಯ.

               ಕಾಶಿ ಮತ್ತು ಕನ್ಯಾಕುಮಾರಿಯಿಂದ ಸ್ಪರ್ಧಿಸುವುದು ಪ್ರಧಾನಿ ಸ್ಥಾನಕ್ಕೆ ಸೂಕ್ತವಾಗಿರುತ್ತದೆ ಎಂದು ಕೆಲವು ಅಭಿಪ್ರಾಯ ಪಟ್ಟಿದ್ದಾರೆ ಎಂದು ಬಿಜೆಪಿಯ ಆಪ್ತ ಮೂಲವೊಂದು ತಿಳಿಸಿದೆ.  ಕನ್ಯಾಕುಮಾರಿ ಬದಲಿಗೆ ಕೊಯಮತ್ತೂರು ಕ್ಷೇತ್ರವನ್ನು ಪ್ರಧಾನಿ ಆಯ್ಕೆ ಮಾಡಿಕೊಳ್ಳುವ ಬಗ್ಗೆಯೂ ಊಹಾಪೋಹಗಳು ಹರಿದಾಡುತ್ತಿವೆ.

                 ಕನ್ಯಾಕುಮಾರಿಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಬಿಜೆಪಿ ಅಭ್ಯರ್ಥಿ ಪೊನ್ ರಾಧಾಕೃಷ್ಣನ್ ಅವರು 2021 ರ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ವಿಜಯ್‌ಕುಮಾರ್ ವಿರುದ್ಧ ನೇರಾನೇರಾ ಫೈಟ್ ಕೊಟ್ಟಿದ್ದರು. ಬಿಜೆಪಿ 4,38,087              ಮತಗಳನ್ನು ಪಡೆದರೆ, ಕಾಂಗ್ರೆಸ್ 5,76,037 ಮತಗಳನ್ನು ಪಡೆದಿತ್ತು.

                           ಕೊಯಮತ್ತೂರಿನಲ್ಲಿ ಬಿಜೆಪಿಯ ಕೊಯಮತ್ತೂರು ದಕ್ಷಿಣದ ಶಾಸಕ ವನತಿ ಶ್ರೀನಿವಾಸನ್ ಇದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿಯ ಸಿಪಿ ರಾಧಾಕೃಷ್ಣನ್ ಅವರು 3,92,007 ಮತಗಳನ್ನು ಪಡೆದರು, ಸಿಪಿಎಂನ ಪಿಆರ್ ನಟರಾಜನ್ ಅವರು 5,71,150 ಮತಗಳನ್ನು ಪಡೆದರು.


    ಕಾಮೆಂಟ್‌‌ ಪೋಸ್ಟ್‌ ಮಾಡಿ

    0 ಕಾಮೆಂಟ್‌ಗಳು
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    Qries