ನವದೆಹಲಿ: ಇದೇ 20ರಿಂದ ಆರಂಭವಾಗಲಿರುವ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 21 ಹೊಸ ಮಸೂದೆಗಳನ್ನು ಮಂಡಿಸಲು ಯೋಜಿಸಿದೆ.
ನವದೆಹಲಿ: ಇದೇ 20ರಿಂದ ಆರಂಭವಾಗಲಿರುವ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 21 ಹೊಸ ಮಸೂದೆಗಳನ್ನು ಮಂಡಿಸಲು ಯೋಜಿಸಿದೆ.
ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತ ವಿವಾದಾತ್ಮಕ ಮಸೂದೆ, ಡಿಜಿಟಲ್ ವೈಯಕ್ತಿಕ ಡೇಟಾ ರಕ್ಷಣೆ ಮಸೂದೆ ಸೇರಿದಂತೆ ಒಟ್ಟು 31 ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಉದ್ದೇಶಿಸಿದೆ ಎಂದು ಮೂಲಗಳು ಹೇಳಿವೆ.
ಇನ್ನೊಂದೆಡೆ, ಕೆಲ ವಿವಾದಾತ್ಮಕ ಮಸೂದೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ಸಜ್ಜಾಗಿವೆ. ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಅಗತ್ಯ ಸಂಖ್ಯಾಬಲ ಇಲ್ಲ. ಹೀಗಾಗಿ ಮಸೂದೆಗಳನ್ನು ಅಂಗೀಕರಿಸಲು ವೈಎಸ್‌ಆರ್ ಕಾಂಗ್ರೆಸ್, ಬಿಜೆಡಿ ಪಕ್ಷಗಳನ್ನು ಅವಲಂಬಿಸಬೇಕಾದ ಅನಿವಾರ್ಯವನ್ನು ಎನ್‌ಡಿಎ ಎದುರಿಸುತ್ತಿದೆ.
ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತ ಮಸೂದೆ ವಿಚಾರವಾಗಿ ಕಾಂಗ್ರೆಸ್ ತನ್ನ ನಿಲುವನ್ನು ಬಹಿರಂಗಪಡಿಸಿಲ್ಲ. ಆದರೆ, ರಾಜ್ಯಸಭೆಯಲ್ಲಿ ಪಕ್ಷವು ಈ ಮಸೂದೆಗೆ ಬೆಂಬಲ ನೀಡುವುದಿಲ್ಲ ಎಂದು ಮೂಲಗಳು ಹೇಳಿವೆ.
ಇತ್ತೀಚೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆ-2023 ಕೂಡ ಸಂಸತ್‌ನಲ್ಲಿ ಅಂಗೀಕರಿಸಲಿರುವ ಮಹತ್ವದ ಮಸೂದೆಯಾಗಿದೆ.