HEALTH TIPS

ಮಾನನಷ್ಟ ಮೊಕದ್ದಮೆ: ಜು.21ಕ್ಕೆ ರಾಹುಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

               ವದೆಹಲಿ: ಮೋದಿ ಉಪನಾಮ ಕುರಿತಾದ ಹೇಳಿಕೆಗೆ ಸಂಬಂಧಿಸಿದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ತಮಗೆ ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ನ ಜುಲೈ 7ರ ತೀರ್ಪು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

                 ರಾಹುಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು, ಜುಲೈ 21 ಅಥವಾ ಜುಲೈ 24 ರಂದು ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಬೇಕೆಂದು ಕೋರಿದ್ದರು. ಮನವಿ ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ, ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಜುಲೈ 21ರಂದು ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.

                   ನ್ಯಾಯಾಲಯದ ತೀರ್ಪಿಗೆ ತಡೆ ನೀಡದಿದ್ದರೆ, ಅದು ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ ಎಂದು ಜುಲೈ 15ರಂದು ಸಲ್ಲಿಸಿದ ಮೇಲ್ಮನವಿಯಲ್ಲಿ ರಾಹುಲ್ ಗಾಂಧಿ ಮನವಿ ಮಾಡಿದ್ದರು

               ಹೈಕೋರ್ಟ್ ತೀರ್ಪಿಗೆ ತಡೆ ನೀಡದಿದ್ದರೆ ಅದು ಪ್ರಜಾಸತ್ತಾತ್ಮಕ ಸಂಸ್ಥೆಗಳ ವ್ಯವಸ್ಥಿತ, ಪುನರಾವರ್ತಿತ ಭ್ರಷ್ಟತೆಗೆ ಒತ್ತು ನೀಡುತ್ತದೆ. ಅದರ ಪರಿಣಾಮವಾಗಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದಂತಾಗುತ್ತದೆ. ಇದು ಭಾರತದ ರಾಜಕೀಯ ವಾತಾವರಣ ಮತ್ತು ಭವಿಷ್ಯಕ್ಕೆ ತೀವ್ರ ಹಾನಿಕಾರಕವಾಗಿದೆ ಎಂದು ಅವರು ಪ್ರತಿಪಾದಿಸಿದ್ದರು.

                  2019ರಲ್ಲಿ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು, ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು, ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ‌ರಾಹುಲ್‌ಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries