ನವದೆಹಲಿ: ₹ 289.15 ಕೋಟಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ತಿರುಪತಿ ಇನ್ಫ್ರಾ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಜಗ ಮೋಹನ್ ಗಾರ್ಗ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ದೆಹಲಿಯಲ್ಲಿ ಹೈ ಎಂಡ್ ಹೋಟೆಲ್ ಯೋಜನೆಗಾಗಿ ತೆಗೆದುಕೊಂಡ ಸಾಲದ ಹಣವನ್ನು ಕಂಪನಿಯು ಅಕ್ರಮವಾಗಿ ಬೇರೆಡೆಗೆ ವರ್ಗಾಯಿಸಿದೆ ಎಂದು ಆರೋಪಿಸಲಾಗಿದೆ.
ಗರ್ಗ್ ಅವರನ್ನು ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜುಲೈ 13 ರವರೆಗೆ ಅವರನ್ನು ತನಿಖಾ ಸಂಸ್ಥೆಯ ವಶಕ್ಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಲದ ಹಣವನ್ನು ಅಕ್ರಮವಾಗಿ ಬೇರೆಡೆಗೆ ವರ್ಗಾಯಿಸುವ ಮೂಲಕ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಒಕ್ಕೂಟಕ್ಕೆ ₹289.15 ಕೋಟಿ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) 2022ರ ಮೇ 25 ರಂದು ಕಂಪನಿ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.