ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದತಿ ಹಾಗೂ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 11ರಂದು ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಸೇರಿದಂತೆ ಐವರು ನ್ಯಾಯಾದೀಶರನ್ನೊಳಗೊಂಡ ಪೀಠ ಈ ಅರ್ಜಿಗಳ ವಿಚಾರಣೆ ನಡೆಸಲಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು 2019ರ ಆಗಸ್ಟ್ 5ರಂದು ರದ್ದುಪಡಿಸಿದ್ದ ಕೇಂದ್ರ ಸರ್ಕಾರ, ರಾಜ್ಯವನ್ನು 'ಜಮ್ಮು ಮತ್ತು ಕಾಶ್ಮೀರ' ಹಾಗೂ 'ಲಡಾಖ್' ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.
ರಾಜ್ಯ ವಿಭಜನೆಗೂ ಮುನ್ನ ಇಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿತ್ತು. ಆದರೆ, ಬಿಜೆಪಿಯು 2018ರ ಜೂನ್ 19ರಂದು ಬೆಂಬಲ ಹಿಂಪಡೆಯುವುದರೊಂದಿಗೆ ಸರ್ಕಾರ ಪತನಗೊಂಡಿತ್ತು. ಮುಖ್ಯಮಂತ್ರಿ ಸ್ಥಾನಕ್ಕೆ ಮುಫ್ತಿ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಯಾವುದೇ ಚುನಾಯಿತ ಸರ್ಕಾರ ರಚನೆಯಾಗಿಲ್ಲ.