ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿಯಲ್ಲಿ ಬುಧವಾರ ಮಧ್ಯರಾತ್ರಿ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಿಂದಾಗಿ ಕನಿಷ್ಠ ಐದು ಮಂದಿ ಮೃತಪಟ್ಟಿದ್ದು, ಹಲವರು ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿಯಲ್ಲಿ ಬುಧವಾರ ಮಧ್ಯರಾತ್ರಿ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಿಂದಾಗಿ ಕನಿಷ್ಠ ಐದು ಮಂದಿ ಮೃತಪಟ್ಟಿದ್ದು, ಹಲವರು ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಈವರೆಗೆ 75 ಮಂದಿಯನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕೊಂಕಣ ಪ್ರದೇಶದಲ್ಲಿ ಕಳೆದ 36 ತಾಸಿನಲ್ಲಿ 150ರಿಂದ 200 ಮಿ.ಮೀ. ಮಳೆ ಸುರಿದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಬುಡಕಟ್ಟು ಸಮುದಾಯದ 30ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿ ವಾಸಿಸುತ್ತಿವೆ ಎಂದು ತಿಳಿದು ಬಂದಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಎಂಎ) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಯಗಢ ಸ್ಥಳೀಯಾಡಳಿತ ಮತ್ತು ಪೊಲೀಸ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಮಹಾರಾಷ್ಟ್ರ ಪರ್ವತಾರೋಹಿಗಳ ತಂಡವನ್ನು (ಎಂಎಂಆರ್‌ಸಿಸಿ) ಸ್ಥಳಕ್ಕೆ ರವಾನಿಸಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಮೂವರು ಸಚಿವರು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಇಲ್ಲಿನ ದುರ್ಗಮ ಭೂಪ್ರದೇಶವು ರಕ್ಷಣಾ ಕಾರ್ಯಾಚರಣೆಗೆ ಸವಾಲಾಗಿ ಪರಿಣಮಿಸಿದೆ.