ವಾರಂಗಲ್: ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣದಲ್ಲಿ ಸುಮಾರು ₹6,100 ಕೋಟಿ ಮೌಲ್ಯದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ವಾರಂಗಲ್: ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣದಲ್ಲಿ ಸುಮಾರು ₹6,100 ಕೋಟಿ ಮೌಲ್ಯದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಶನಿವಾರ ಬೆಳಿಗ್ಗೆ ಹೈದರಾಬಾದ್‌ಗೆ ಬಂದಿಳಿದ ಪ್ರಧಾನಿ ಮೋದಿ, ವಾರಂಗಲ್‌ನಲ್ಲಿ ಭದ್ರಕಾಳಿ ದೇವಿ ದೇವಾಲಯಕ್ಕೆ ಭೇಟಿ ನೀಡಿದರು. ಬಳಿಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ತೆಲಂಗಾಣ ರಾಜ್ಯಪಾಲೆ ತಮಿಳ್‌ಇಸೈ ಸೌಂದರರಾಜನ್, ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಮತ್ತು ಬಿಜೆಪಿ ತೆಲಂಗಾಣ ಘಟಕದ ನೂತನ ಅಧ್ಯಕ್ಷ ಜಿ. ಕಿಶನ್ ರೆಡ್ಡಿ ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ತೆಲಂಗಾಣದಲ್ಲಿ 2024ರ ವೇಳೆ ₹2 ಲಕ್ಷ ಕೋಟಿ ಮೌಲ್ಯದ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದರು.